ಹುಲಸೂರ: ಸಮೀಪದ ಭಾಲ್ಕಿ ತಾಲ್ಲೂಕಿನ ವಾಂಝರಖೇಡ್, ಹಲಸಿತುಗಾಂವ್ ಗ್ರಾಮಗಳ ಮಂಜರಾ ನದಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಮರಳು ತೆಗೆಯಲಾಗುತ್ತಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪರಿಶೀಲನೆ ವೇಳೆ ಅಕ್ರಮ ಮರಳು ಗಣಿಗಾರಿಕೆಗೆ ಬಳಸಲಾಗುತ್ತಿದ್ದ ಸುಮಾರು 10 ಕಬ್ಬಿಣದ ತೆಪ್ಪಗಳು ಹಾಗೂ ಒಂದು ಕಬ್ಬಿಣದ ದೋಣಿ ಪತ್ತೆಯಾಯಿತು. ತಕ್ಷಣ ಕ್ರಮ ಕೈಗೊಂಡ ಅಧಿಕಾರಿಗಳು ಗ್ಯಾಸ್ ಕಟರ್ ಸಿಬ್ಬಂದಿಯನ್ನು ಸ್ಥಳಕ್ಕೆ ಕರೆಸಿ ಕಾರ್ಯಾಚರಣೆ ಆರಂಭಿಸಿದರು.

ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳಾದ ವಿಶ್ವನಾಥ್, ಧನರಾಜ್ (ಭೂವಿಜ್ಞಾನಿ), ಮೆಹಕರ ಪೊಲೀಸ್ ಠಾಣೆಯ ಪಿಎಸ್ಐ ಸುದರ್ಶನರೆಡ್ಡಿ ಹಾಗೂ ಎಎಸ್ಐ ಶರಣಪ್ಪ ಹಾಗೂ ಇತರ ಸಿಬ್ಬಂದಿಯ ಸಮ್ಮುಖದಲ್ಲಿ ಕಾರ್ಯಾಚರಣೆ ನಡೆಯಿತು.

ಅಕ್ರಮ ಮರಳು ಗಣಿಗಾರಿಕೆಗೆ ಬಳಸಲಾಗುತ್ತಿದ್ದ ತೆಪ್ಪಗಳಿಗೆ ಗ್ಯಾಸ್ ಕಟರ್ ಮೂಲಕ ರಂಧ್ರಗಳನ್ನು ಮಾಡಿ ನಿಷ್ಕ್ರಿಯಗೊಳಿಸಲಾಯಿತು. ಇದರಿಂದ ಮಂಜರಾ ನದಿ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅನಧಿಕೃತ ಮರಳು ಗಣಿಗಾರಿಕೆಗೆ ತಾತ್ಕಾಲಿಕವಾಗಿ ತಡೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಾಂಝರಖೇಡ್ ಹಾಗೂ ಹಲಸಿತುಗಾಂವ್ ಗ್ರಾಮಗಳ ವ್ಯಾಪ್ತಿಯಲ್ಲಿ ಮುಂದಿನ ದಿನಗಳಲ್ಲಿ ಇಂತಹ ಅಕ್ರಮ ಚಟುವಟಿಕೆಗಳು ಮರುಕಳಿಸದಂತೆ ಸಂಬಂಧಿತ ಇಲಾಖೆಗಳು ಕಟ್ಟುನಿಟ್ಟಿನ ನಿಗಾವಹಿಸಲಿವೆ ಎಂದು ತಿಳಿಸಿದರು.

ವಾಂಝರಖೇಡ್ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಲಾ ನವನಾಥ ಬೋಲಸುರೆ ‘ಪ್ರಜಾವಾಣಿ’ಗೆ ಮಾತನಾಡಿ, ‘ಅಕ್ರಮ ಮರಳು ಸಾಗಣೆಗೆ ಕೆಲ ಅಧಿಕಾರಿಗಳ ಸಾಥ್ ದೊರೆಯುತ್ತಿರುವ ಕಾರಣ ಈ ಚಟುವಟಿಕೆ ರಾಜಾರೋಷವಾಗಿ ನಡೆಯುತ್ತಿದೆ. ಪ್ರತಿ ಬಾರಿ ನಾಲ್ಕೈದು ದೋಣಿಗಳನ್ನು ವಶಕ್ಕೆ ಪಡೆದು ಕ್ರಮ ಕೈಗೊಂಡರೂ ಕೆಲವೇ ದಿನಗಳಲ್ಲಿ ಮತ್ತೆ ಅಕ್ರಮ ಚಟುವಟಿಕೆ ಆರಂಭವಾಗುತ್ತಿದೆ. ಹೀಗಾಗಿ ಈ ಪ್ರಕರಣವನ್ನು ಸಂಬಂಧಿತ ಇಲಾಖೆಗಳು ಸೂಕ್ಷ್ಮವಾಗಿ ಹಾಗೂ ಗಂಭೀರವಾಗಿ ಪರಿಗಣಿಸಿ ಶಾಶ್ವತ ತಡೆಗೆ ಕ್ರಮ ಕೈಗೊಳ್ಳಬೇಕು. ಯಾವುದೇ ಅಧಿಕಾರಿಗಳು ಅಕ್ರಮ ಚಟುವಟಿಕೆಗಳಿಗೆ ಬೆಂಬಲ ನೀಡಬಾರದು’ ಎಂದು ಆಗ್ರಹಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-33-287637716

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.