ಹುಲಸೂರ: ವಿದ್ಯುತ್ ತಂತಿಗಳ ಶಾರ್ಟ್ ಸರ್ಕಿಟ್ನಿಂದ ಜಾನುವಾರುಗಳಿಗೆ ಖರೀದಿಸಿದ್ದ ಮೇವು ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ಭಾಲ್ಕಿ ತಾಲ್ಲೂಕಿನ ಕೊಂಗಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ರೈತ ಬಾಲಾಜಿ ಮುರುಳಿದರ ಡಾವರಗಾವೇ ಅವರು ಜಾನುವಾರುಗಳಿಗಾಗಿ ಒಟ್ಟು ₹12 ಸಾವಿರ ನೀಡಿ ಬೇರೆ ಗ್ರಾಮದಲ್ಲಿ ಮೇವು ಖರೀದಿಸಿದ್ದರು. ಮೇವು ಮನೆಗೆ ಸಾಗಿಸುತ್ತಿದ್ದ ವೇಳೆ ಮೇಲಿಂದ ಹಾದುಹೋಗಿದ್ದ ವಿದ್ಯುತ್ ತಂತಿಗಳಲ್ಲಿ ಉಂಟಾದ ಶಾರ್ಟ್ ಸರ್ಕಿಟ್ನಿಂದ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಕ್ಷಣಾರ್ಧದಲ್ಲೇ ಸಂಪೂರ್ಣ ಮೇವು ಸುಟ್ಟು ಕರಕಲಾಗಿದೆ.

ಸುದ್ದಿ ತಿಳಿದು ಸ್ಥಳಕ್ಕೆ ಭಾಲ್ಕಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಕೈಗೊಂಡರು. ಅಷ್ಟರಲ್ಲೇ ಮೇವು ಸಂಪೂರ್ಣ ಸುಟ್ಟು ಹೋಗಿತ್ತು ಎಂದು ತಿಳಿದುಬಂದಿದೆ.

‘ದನಗಳಿಗೆ ಕಷ್ಟಪಟ್ಟು ಹಣ ಸೇರಿಸಿ ಮೇವು ತಂದಿದ್ದೆ. ಒಂದು ಕ್ಷಣದಲ್ಲಿ ಎಲ್ಲವೂ ಸುಟ್ಟುಹೋಯಿತು. ಈಗ ಜಾನುವಾರುಗಳ ಚಿಂತೆ ಕಾಡುತ್ತಿದೆ. ಸರ್ಕಾರ ಕೂಡಲೇ ನೆರವಿಗೆ ಬರಬೇಕು’ ಎಂದು ರೈತ ಬಾಲಾಜಿ ಅಳಲು ತೋಡಿಕೊಂಡರು.

ಘಟನೆ ಕುರಿತು ಗ್ರಾಮ ಲೆಕ್ಕಾಧಿಕಾರಿ ಬಾಬುರಾವ್ ಪ್ರತಿಕ್ರಿಯಿಸಿ, ‘ರೈತನಿಗೆ ಸಂಭವಿಸಿದ ನಷ್ಟದ ಪ್ರಾಥಮಿಕ ವರದಿಯನ್ನು ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ, ಪರಿಹಾರ ದೊರಕಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-33-929985005

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.