ಭಾಲ್ಕಿ: ‘ತಾಲ್ಲೂಕಿನ ಕೋಸಂ ಗ್ರಾಮ ಪಂಚಾಯಿತಿಯಲ್ಲಿ 2025-26ನೇ ಸಾಲಿನ 15ನೇ ಹಣಕಾಸು ಯೋಜನೆ ಅಡಿಯಲ್ಲಿ ಅವ್ಯವಹಾರ ಮಾಡಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೇಲೆ ಕ್ರಮ ಕೈಗೊಳ್ಳಬೇಕು’ ಎಂದು ಬ್ಲ್ಯೂ ಟೈಗರ್ ಯುಥ್ ಕ್ಲಬ್ ಬೀದರ ಜಿಲ್ಲಾಧ್ಯಕ್ಷ ಆರ್.ಬಿ. ದೇವಘಡೆ ಆಗ್ರಹಿಸಿದ್ದಾರೆ.

ಈ ಸಂಬಂಧ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

15ನೇ ಹಣಕಾಸು ಆಯೋಗದ ನಿಧಿಯಿಂದ ವಿವಿಧ ಕಾಮಗಾರಿಗಳಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಾಡಿರುವ ಅವ್ಯವಹಾರದ ಬಗ್ಗೆ ಪರಿಶೀಲನೆ ಸಂಬಂಧ ಏ.2 ರಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗೆ ಪತ್ರ ಬರೆಯಲಾಗಿತ್ತು. ಆದರೆ ಈಯವರೆಗೆ ಕ್ರಮ ಕೈಗೊಂಡಿಲ್ಲ.

ಅವ್ಯವಹಾರ ಪರಿಶೀಲನೆಗೆ ಜಿಲ್ಲೆಯ ಅಧಿಕಾರಿಗಳಿಗೆ ನಿಯೋಜಿಸಬೇಕು. ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಅಧಿಕಾರಿಗಳ ವಿರುದ್ದ ಉಗ್ರ ಹೋರಾಟ ಮಾಡಲಾಗುವುದು ಎಂದು ಮನವಿ ಪತ್ರದಲ್ಲಿ ಎಚ್ಚರಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-33-1555566110

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.