ಭಾಲ್ಕಿ: ಭೂ ಮಾಪಕರ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ತಕ್ಷಣ ಈಡೇರಿಸಬೇಕು ಎಂದು ಜಿಲ್ಲಾ ಯುವಕ್ರಾಂತಿ ಸಂಘಟನೆ ಅಧ್ಯಕ್ಷ ಸಂಗಮೇಶ ಭೂರೆ ಒತ್ತಾಯಿಸಿದ್ದಾರೆ.

ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿರುವ ಅವರು, ‘ವಿವಿಧ ಬೇಡಿಕೆ ಈಡೇರಿಕೆಗೆ ಕಳೆದ ಹಲವು ತಿಂಗಳಿನಿಂದ ರಾಜ್ಯದಾದ್ಯಂತ ಮುಷ್ಕರ ನಡೆಸುತ್ತಿದ್ದಾರೆ. ಆದರೆ, ಸರ್ಕಾರ ತಟಸ್ಥವಾಗಿ ಉಳಿದಿರುವುದು ತೀವ್ರ ಬೇಸರ ತರಿಸಿದೆ’ ಎಂದಿದ್ದಾರೆ.

ಮುಷ್ಕರದಿಂದ ಗ್ರಾಮೀಣ ಭಾಗದಲ್ಲಿ ಭೂ ಮಾಪನ ಕಾರ್ಯ, ಪಹಣಿ ತಿದ್ದುಪಡಿ ಸೇರಿ ವಿವಿಧ ಕೆಲಸಗಳು ಸಂಪೂರ್ಣವಾಗಿ ನಿಂತು ಹೋಗಿವೆ. ಕೂಡಲೇ ಭೂಮಾಪಕರ ಬೇಡಿಕೆಗೆ ಸ್ಪಂದಿಸಿ, ಕಾರ್ಯಗಳು ಸುಗಮವಾಗಿ ನಡೆಯುವಂತೆ ಮಾಡಬೇಕು’ ಎಂದು ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-33-32308337

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.