ಭಾಲ್ಕಿ: ‘ವಕೀಲ ವೃತ್ತಿಯು ಅತ್ಯಂತ ಪವಿತ್ರ ಮತ್ತು ಜವಾಬ್ದಾರಿಯುತ ಸೇವೆ’ ಎಂದು ಹಿರಿಯ ಶ್ರೇಣಿಯ ನ್ಯಾಯಾಧೀಶ ರಾಘವೇಂದ್ರ ವೈಜಿನಾಥ ಹೇಳಿದರು.

ನಗರದ ವಕೀಲರ ಸಂಘದ ಸಭಾಂಗಣದಲ್ಲಿ ತಾಲ್ಲೂಕು ವಕೀಲರ ಸಂಘದ ವತಿಯಿಂದ ಬುಧವಾರ ಆಯೋಜಿಸಿದ್ದ ಬೀಳ್ಕೊಡುಗೆ ಮತ್ತು ವಕೀಲರ ಪ್ರತಿಭಾವಂತ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ವಕೀಲರು ನೊಂದವರಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕು ಅಂದಾಗ ಜನರಿಗೆ ನ್ಯಾಯಾಂಗದ ಮೇಲೆ ಗೌರವ, ವಿಶ್ವಾಸ ಮತ್ತಷ್ಟು ಹೆಚ್ಚಾಗುತ್ತದೆ. ಸುಮಾರು ಮೂರು ವರ್ಷಗಳ ಕಾಲ ಎಲ್ಲರ ಸಹಕಾರದೊಂದಿಗೆ ಉತ್ತಮ ಸೇವೆ ಸಲ್ಲಿಸುವ ಪ್ರಯತ್ನ ಮಾಡಿದ್ದೇನೆ. ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆಗೈದ ವಕೀಲರ ಮಕ್ಕಳನ್ನು ಗುರುತಿಸಿ, ಸನ್ಮಾನಿಸುತ್ತಿರುವುದು ಸಂತಸದ ಸಂಗತಿ’ ಎಂದರು.

ಅಧ್ಯಕ್ಷತೆ ವಹಿಸಿದ್ದ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಮಹೇಶ ರಾಚೋಟೆ, ಕಿರಿಯ ಶ್ರೇಣಿ ನ್ಯಾಯಾಧೀಶ ದೇಷಭೂಷಣ ಕೌಜಲಗಿ ಮಾತನಾಡಿದರು.

ತಾಲ್ಲೂಕು ವಕೀಲರ ಸಂಘದ ಜಂಟಿ ಕಾರ್ಯದರ್ಶಿ ನೀಲಕಂಠ ಬಿರಾದಾರ ಸೇರಿದಂತೆ ಹಲವರು ಇದ್ದರು. ವಕೀಲರ ಸಂಘದ ಉಪಾಧ್ಯಕ್ಷ ಮಕರಂದ ಮಾನಕಾರಿ ಸ್ವಾಗತಿಸಿದರು. ದಯಾನಂದ ಪವಾರ್ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ವಾಗೇಶ ಪಾಟೀಲ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-33-1480051741

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.