ಸೋಮವಾರ, ನವೆಂಬರ್ 30, 2020
19 °C
ಅಧ್ಯಕ್ಷರಾಗಿ ಬಸವರಾಜ ವಂಕೆ, ಉಪಾಧ್ಯಕ್ಷೆಯಾಗಿ ರಾಜೇಶ್ವರಿ ಮೊರೆ ಆಯ್ಕೆ

ಭಾಲ್ಕಿ ಪುರಸಭೆ ಕಾಂಗ್ರೆಸ್ ತೆಕ್ಕೆಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಭಾಲ್ಕಿ: ಇಲ್ಲಿ ಶನಿವಾರ ನಡೆದ ಪಟ್ಟಣದ ಪುರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಬಸವರಾಜ ವಂಕೆ ಮತ್ತು ಉಪಾಧ್ಯಕ್ಷೆಯಾಗಿ ರಾಜೇಶ್ವರಿ ರಾಜಕುಮಾರ ಮೊರೆ ಆಯ್ಕೆಯಾದರು.

ಪಟ್ಟಣದ ಪುರಸಭೆಯಲ್ಲಿ ಬಿಜೆಪಿಗೆ ಮುಖಭಂಗವಾಗಿದ್ದು, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಮತ್ತೊಮ್ಮೆ ಹಿಡಿತ ಸಾಧಿಸಿದ್ದಾರೆ.

ಪುರಸಭೆಯಲ್ಲಿ ಕಾಂಗ್ರೆಸ್ ಸರಳ ಬಹುಮತ ಹೊಂದಿದೆ. ಆದರೆ, ಅಧ್ಯಕ್ಷ ಸ್ಥಾನಕ್ಕಾಗಿ ಬಿಜೆಪಿಯಿಂದ ಪ್ರವೀಣ ಶ್ರೀಮಂತರಾವ್‌ ಅವರ ನಾಮಪತ್ರ ಸಲ್ಲಿಕೆ ಆಗಿದ್ದರಿಂದ ಚುನಾವಣೆ ನಡೆಯಿತು.

ಕಾಂಗ್ರೆಸ್‍ನ 20 ಸದಸ್ಯರು ಕೈ ಎತ್ತುವ ಮೂಲಕ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಬಸವರಾಜ ವಂಕೆ ಅವರನ್ನು ಬೆಂಬಲಿಸಿದರು. ಬಿಜೆಪಿ ಅಭ್ಯರ್ಥಿ ಕೇವಲ 4 ಮತಗಳು ಪಡೆದು ಮುಖಭಂಗ ಅನುಭವಿಸಿದರು. ಹೀಗಾಗಿ ಚುನಾವಣಾಧಿಕಾರಿ ಅಣ್ಣಾರಾವ್‌ ಪಾಟೀಲ ಅಂತಿಮವಾಗಿ ಬಸವರಾಜ ವಂಕೆ, ರಾಜೇಶ್ವರಿ ರಾಜಕುಮಾರ ಆಯ್ಕೆ ಆಗಿದ್ದಾರೆ ಎಂದು ಘೋಷಣೆ ಮಾಡಿದರು.

ಜೆಡಿಎಸ್‍ನ 4 ಸದಸ್ಯರು ಚುನಾವಣೆಯಲ್ಲಿ ತಟಸ್ಥರಾಗಿ ಉಳಿದಿದ್ದರು. ಕಾಂಗ್ರೆಸ್‍ನ ಮುಖಂಡರು, ಎಲ್ಲ ಸದಸ್ಯರು ಇದ್ದರು.

ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸನ್ಮಾನಿಸಿದರು.

ಪಟ್ಟಣದ ಅಭಿವೃದ್ಧಿಗೆ ₹250 ಕೋಟಿ ಅನುದಾನ: ‘ನಾನು ಪೌರಾಡಳಿತ ಸಚಿವನಿದ್ದ ಸಂದರ್ಭದಲ್ಲಿ ಪಟ್ಟಣದ ಅಭಿವೃದ್ಧಿಗೆ ₹250 ಕೋಟಿ ಅನುದಾನ ಬಿಡುಗಡೆ ಮಾಡಿಸಿದ್ದೇನೆ. 24x7 ಕುಡಿವ ನೀರು ಪೂರೈಕೆಗೆ ₹140 ಕೋಟಿ ಹಾಗೂ ರಸ್ತೆ, ಚರಂಡಿ, ಬೀದಿದೀಪ ಅಳವಡಿಕೆಗೆ ₹110 ಕೋಟಿ ಅನುದಾನ ನೀಡಿದ್ದೇನೆ. ಅಭಿವೃದ್ಧಿ ಕೆಲಸಗಳು ಪ್ರಗತಿಯಲ್ಲಿವೆ. ಏನೇ ಸಮಸ್ಯೆ ಇದ್ದರೂ ನನ್ನ ಗಮನಕ್ಕೆ ತನ್ನಿ. ಅಭಿವೃದ್ಧಿ ಕೆಲಸಕ್ಕಾಗಿ ಪಕ್ಷಾತೀತವಾಗಿ ಸ್ಪಂದಿಸುತ್ತೇನೆ’ ಎಂದು ಶಾಸಕ ಖಂಡ್ರೆ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.