ಗುರುವಾರ, 10 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಭಾಲ್ಕಿ | ಪುರಸಭೆ ಅಧ್ಯಕ್ಷೆಯಾಗಿ ಶಶಿಕಲಾ, ಉಪಾಧ್ಯಕ್ಷರಾಗಿ ವಿಜಯಕುಮಾರ ಆಯ್ಕೆ

Published : 13 ಸೆಪ್ಟೆಂಬರ್ 2024, 14:41 IST
Last Updated : 13 ಸೆಪ್ಟೆಂಬರ್ 2024, 14:41 IST
ಫಾಲೋ ಮಾಡಿ
Comments

ಭಾಲ್ಕಿ: ಪುರಸಭೆ ಆಡಳಿತ ಮಂಡಳಿಯ ಎರಡನೇ ಅವಧಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನ ನಿರೀಕ್ಷೆಯಂತೆ ಕಾಂಗ್ರೆಸ್ ತೆಕ್ಕೆಗೆ ಜಾರಿದೆ.

ನೂತನ ಅಧ್ಯಕ್ಷರಾಗಿ ಶಶಿಕಲಾ ಅಶೋಕ, ಉಪಾಧ್ಯಕ್ಷರಾಗಿ ವಿಜಯಕುಮಾರ ರಾಜಭವನ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ ಎಂದು ಚುನಾವಣಾಧಿಕಾರಿ ಮಲ್ಲಿಕಾರ್ಜುನ ವಡ್ಡನಕೇರಿ ತಿಳಿಸಿದ್ದಾರೆ.

ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಶುಕ್ರವಾರ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಪರಿಶಿಷ್ಟ ಜಾತಿಗೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನ, ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ತಲಾ ಒಂದೊಂದೇ ನಾಮಪತ್ರ ಸಲ್ಲಿಕೆ ಆಗಿದ್ದವು. ಹಾಗಾಗಿ, ಚುನಾವಣಾಧಿಕಾರಿ ಅವಿರೋಧ ಆಯ್ಕೆ ಪ್ರಕಟಿಸಿದರು.

ಪುರಸಭೆ ಮಾಜಿ ಅಧ್ಯಕ್ಷ ಬಸವರಾಜ ವಂಕೆ, ಅನಿಲ್ ಸುಂಟೆ, ಸದಸ್ಯರಾದ ಓಂಕಾರ ಮೋರೆ, ಮಹೀಬುಬಸಾಬ್ ಇಸ್ಮಾಯಿಲ್ ಸಾಬ್, ಅನಿತಾ ಧನರಾಜ, ಸುಮನಬೀ ಫಯಮೋದ್ದಿನ್, ಮಾಣಿಕಪ್ಪ ರೇಷ್ಮೆ, ರಾಹುಲ್ ಭೀಮಣ್ಣ, ಲಕ್ಷ್ಮಿ ಶಿವರಾಜ, ರಾಜಕುಮಾರ ವಂಕೆ, ಶ್ರೀದೇವಿ ಚಂದ್ರಕಾಂತ, ರಾಜೇಶ್ವರಿ ರಾಜಕುಮಾರ, ಬಾಲಾಜಿ ಖೇಡಕರ್, ಅಶೋಕ ಅರ್ಜುನ್, ಶ್ವೇತಾ ವಿಜಯಕುಮಾರ, ಲಲಿತಾಬಾಯಿ ಬಾಬು, ಶಂಭುಲಿಂಗ ಸ್ವಾಮಿ, ಮುಖ್ಯಾಧಿಕಾರಿ ಸಂಗಮೇಶ ಕಾರಬಾರಿ ಇದ್ದರು.

ಎಲ್ಲರ ಸಹಕಾರದಿಂದ ಭಾಲ್ಕಿಯನ್ನು ಸ್ವಚ್ಛ ಸುಂದರ ಪಟ್ಟಣವನ್ನಾಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು
ಈಶ್ವರ ಖಂಡ್ರೆ ಜಿಲ್ಲಾ ಉಸ್ತುವಾರಿ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT