ಶುಕ್ರವಾರ, 14 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲಾ ಪ್ರಾರಂಭೋತ್ಸವ: ಪೂರ್ವ ಸಿದ್ಧತಾ ಸಭೆ

Published 28 ಮೇ 2024, 16:09 IST
Last Updated 28 ಮೇ 2024, 16:09 IST
ಅಕ್ಷರ ಗಾತ್ರ

ಭಾಲ್ಕಿ: ‘ಮುಖ್ಯಶಿಕ್ಷಕರು, ಶಿಕ್ಷಕರು ಎಲ್ಲ ವಿದ್ಯಾರ್ಥಿಗಳಿಗೂ ಶಾಲೆಯಲ್ಲಿ ಉತ್ತಮ ವಾತಾವರಣ ಕಲ್ಪಿಸಿಕೊಡಬೇಕು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಜಹರ್ ಹುಸೇನ್ ಹೇಳಿದರು.

ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದ ಸರ್ಕಾರಿ, ಅನುದಾನಿತ ಪ್ರೌಢಶಾಲಾ ಮುಖ್ಯಶಿಕ್ಷಕರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

‘ಬುಧವಾರದಿಂದ ಶಾಲೆಗಳು ಪ್ರಾರಂಭವಾಗುತ್ತಿವೆ. ಮೇ 29, 30 ಎರಡು ದಿವಸಗಳ ಕಾಲ ಎಲ್ಲಾ ಶಿಕ್ಷಕರು ಕಡ್ಡಾಯವಾಗಿ ಶಾಲೆಯಲ್ಲಿ ಹಾಜರಿದ್ದು, ಶಾಲಾ ಸ್ವಚ್ಛತೆ ಕಾರ್ಯ ಕೈಗೊಳ್ಳಬೇಕು. ಅಡುಗೆ ಸಿಬ್ಬಂದಿ ಅಡುಗೆ ಕೋಣೆ, ಆಹಾರ ದಾಸ್ತಾನುಗಳನ್ನು ಶುದ್ಧಗೊಳಿಸಿ ತಯಾರಿ ನಡೆಸಬೇಕು. 31 ರಂದು ಶಾಲೆಯನ್ನು ತಳಿರು ತೋರಣಗಳಿಂದ ಸಿಂಗರಿಸಿ, ಬಿಸಿಯೂಟದಲ್ಲಿ ಸಿಹಿ ತಿನಿಸು ಮಾಡಿ, ವಿದ್ಯಾರ್ಥಿಗಳಿಗೆ ಸಂಭ್ರಮದಿಂದ ಸ್ವಾಗತಿಸಿಕೊಳ್ಳಬೇಕು’ ಎಂದು ತಿಳಿಸಿದರು.

‘ಎರಡು ದಿನ ವ್ಯಾಪಕ ಪ್ರಚಾರ ನಡೆಸಿ ಮೇ.31ರಿಂದ ಎಲ್ಲಾ ವಿದ್ಯಾರ್ಥಿಗಳು ಕಡ್ಡಾಯವಾಗಿ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳಬೇಕು’ ಎಂದು ತಾಕೀತು ಮಾಡಿದರು.

ಕ್ಷೇತ್ರ ಸಮನ್ವಯಾಧಿಕಾರಿ ಮನೋಹರ ಹೋಳ್ಕರ್ ಮಾತನಾಡಿ, ‘ಎಲ್ಲ ಶಾಲೆಗಳಲ್ಲೂ ಬಯೊಮೆಟ್ರಿಕ್ ವ್ಯವಸ್ಥೆ ಅಳವಡಿಸಲಾಗಿದ್ದು, ಶಿಕ್ಷಕರು ಸಮಯ ಪರಿಪಾಲನೆ ಮಾಡಬೇಕು. ದಾಖಲಾತಿ ಆಂದೋಲನ ನಡೆಸುವ ಮೂಲಕ ಮಕ್ಕಳ ಮನೆಗೆ ಭೇಟಿ ಕೊಟ್ಟು, ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಕ್ಕಳ ಸಂಖೆ ಹೆಚ್ಚಿಸುವಂತೆ ನೋಡಿಕೊಳ್ಳಬೇಕು’ ಎಂದು ಹೇಳಿದರು.

ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಶಕುಂತಲಾ ಸಾಲಮನಿ, ಮಹೇಂದ್ರ ಮಾನ್ಕರ್, ಶಿಕ್ಷಣ ಸಂಯೋಜಕ ಸಹದೇವ.ಜಿ ಮಾತನಾಡಿದರು.

ಮುಖ್ಯಶಿಕ್ಷಕರಾದ ಎಂ.ಡಿ.ಹನೀಫ್, ಕಿರಣಕುಮಾರ ಭಾಟಸಾಂಗವಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಚಿತ್ರ ಸಭೆಯಲ್ಲಿ ಪಾಲ್ಗೊಂಡ ಮುಖ್ಯಶಿಕ್ಷಕರು
ಚಿತ್ರ ಸಭೆಯಲ್ಲಿ ಪಾಲ್ಗೊಂಡ ಮುಖ್ಯಶಿಕ್ಷಕರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT