ಭಾಲ್ಕಿ: ‘ಸುಗಮ ಮತ್ತು ಸುರಕ್ಷಿತ ಪ್ರಯಾಣಕ್ಕೆ ವಾಹನ ಸವಾರರು ಕಡ್ಡಾಯವಾಗಿ ಸಂಚಾರ ನಿಯಮಗಳನ್ನು ಪಾಲಿಸಬೇಕು ಎಂದು ಆರ್ಟಿಒ ಜಾಫರ್ ಸಾಧಿಕ್ ಹೇಳಿದರು.

ತಾಲ್ಲೂಕಿನ ಸಿದ್ದಾಪೂರ ವಾಡಿಯಲ್ಲಿ ಬಿಕೆಐಟಿ ಕಾಲೇಜು ವತಿಯಿಂದ ನಡೆಯುತ್ತಿರುವ ಎನ್ಎಸ್ಎಸ್ ಶಿಬಿರದಲ್ಲಿ ಹಮ್ಮಿಕೊಂಡಿದ್ದ ಉಚಿತ ದಂತ ತಪಾಸಣಾ ಶಿಬಿರ, ಸಂಚಾರ ನಿಯಮಗಳ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ದ್ವಿಚಕ್ರ ವಾಹನ ಸವಾರರು ವಾಹನಗಳನ್ನು ಚಲಾಯಿಸುವಾಗ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ವಾಹನ ಚಾಲಕರು ಸೀಟ್ ಬೆಲ್ಟ್ ತಪ್ಪದೇ ಹಾಕಿಕೊಳ್ಳಬೇಕು’ ಎಂದು ತಿಳಿಸಿದರು.

ಎಸ್. ಬಿ. ಪಾಟೀಲ ದಂತ ಕಾಲೇಜಿನ ಡಾ. ಸಿದ್ದಣ್ಣಾ ಗೌಡ, ಶಾಹಿದ್ ಅವರ ನೇತೃತ್ವದಲ್ಲಿ ದಂತ ಚಿಕಿತ್ಸಾ ಶಿಬಿರ ನಡೆಯಿತು.

ಎನ್ಎಸ್ಎಸ್ ಅಧಿಕಾರಿ ಸೂರ್ಯಕಾಂತ, ಸುನೀಲ ಸಂಗಮೆ, ಸಂತೋಷ ಮೇಹಕ್ರೆ, ಕಾವೇರಿ ರೆಡ್ಡಿ, ರಷ್ಮಿ ನಿಸ್ಪತೆ, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-33-62494656

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.