ಭಾಲ್ಕಿ: ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧೆಡೆ ಅನಧಿಕೃತವಾಗಿ ನಡೆಯುತ್ತಿರುವ ಕೋಚಿಂಗ್ ಸೆಂಟರ್ಗಳನ್ನು ಬಂದ್ ಮಾಡುವಂತೆ ನಮ್ಮ ಕರ್ನಾಟಕ ಸೇನೆಯ ಜಿಲ್ಲಾ ಘಟಕದ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.

ಈ ಕುರಿತು ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ನಮ್ಮ ಕರ್ನಾಟಕ ಸೇನೆಯ ಜಿಲ್ಲಾಧ್ಯಕ್ಷ ಗಣೇಶ ಪಾಟೀಲ ನೇತೃತ್ವದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.

‘ಸರ್ಕಾರದ ಪರವಾನಗಿ ಇಲ್ಲದೇ ಬೇಸಿಗೆ ವಿಶೇಷ ತರಗತಿ ನಡೆಸುವ ಹೆಸರಿನಲ್ಲಿ ರಾಜಾರೋಷವಾಗಿ ಪ್ರತಿವರ್ಷ ಅನಧಿಕೃತ ಕೋಚಿಂಗ್ ಸೆಂಟರ್ಗಳ ಹಾವಳಿ ಹೆಚ್ಚುತಲೇ ಇದೆ. ಈಗಾಗಲೇ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಅನಧಿಕೃತ ಕೋಚಿಂಗ್ ಸೆಂಟರ್ಗಳ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಸೂಚನೆ ನೀಡಿದ್ದಾರೆ. ಆದರೆ, ತಾಲ್ಲೂಕಿನಲ್ಲಿ ಇದುವರೆಗೂ ಒಂದೂ ಪ್ರಕರಣ ದಾಖಲಾಗಿಲ್ಲ. ಇದನ್ನು ಗಮನಿಸಿದರೆ ಶಿಕ್ಷಣ ಇಲಾಖೆ ಅಧಿಕಾರಿಗಳು ಇದರಲ್ಲಿ ಭಾಗಿಯಾಗಿದ್ದಾರೆ ಎಂಬ ಅನುಮಾನ ವ್ಯಕ್ತವಾಗುತ್ತದೆ’ ಎಂದು ಆರೋಪಿಸಿದರು.

‘ಪರವಾನಗಿ ಇಲ್ಲದ ಕೋಚಿಂಗ್ ಸೆಂಟರ್ಗಳು ಬೇಸಿಗೆ ತರಗತಿ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಿವೆ. ಕೂಡಲೇ ಶಿಕ್ಷಣ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡು ಅವುಗಳನ್ನು ಬಂದ್ ಮಾಡಿಸಿ ಸಂಬಂಧಿತರ ಎಫ್ಐಆರ್ ದಾಖಲಿಸಬೇಕು’ ಎಂದು ಮನವಿ ಪತ್ರದಲ್ಲಿ ಆಗ್ರಹಿಸಿದ್ದಾರೆ.

ಪ್ರಮುಖರಾದ ಸುದೀಪ ತೂಗಾವೆ, ಪ್ರಶಾಂತ ಹಣಮಶೆಟ್ಟಿ, ಭದ್ರಯ್ಯ ಸ್ವಾಮಿ, ಜಗದೀಶ ಪಾಟೀಲ, ರಾಜು ಕುಂಬಾರ, ಮಹೇಶ ರಾಚೋಟೆ, ಸಂಗಮೇಶ ಮಾರ್ಗೆ, ರವಿ ಜವಲಕೋಟ ಸೇರಿದಂತೆ ಹಲವರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260307-33-2069606764

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.