ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೀಮ್‌ ಆರ್ಮಿ ಕಾರ್ಯಕರ್ತರ ಪ್ರತಿಭಟನೆ

Last Updated 24 ಸೆಪ್ಟೆಂಬರ್ 2020, 14:53 IST
ಅಕ್ಷರ ಗಾತ್ರ

ಬೀದರ್‌: ರಾಷ್ಟ್ರೀಯ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರಿ ಸಂಸ್ಥೆಗಳ ಖಾಸಗಿಕರಣ ತಡೆಯಬೇಕು ಎಂದು ಆಗ್ರಹಿಸಿ ಭೀಮ್‌ ಆರ್ಮಿ ಜಿಲ್ಲಾ ಘಟಕದ ಕಾರ್ಯಕರ್ತರು ನಗರದ ಅಂಬೇಡ್ಕರ್‌ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಖಾಸಗಿ ಕ್ಷೇತ್ರಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಬುಡಕಟ್ಟುಗಳು, ಇತರೆ ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ಸಮುದಾಯಗಳ ಪ್ರಮಾಣಕ್ಕೆ ಅನುಗುಣವಾಗಿ ಉದ್ಯೋಗದಲ್ಲಿ ಪ್ರಾತಿನಿಧ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಹೊರ ಗುತ್ತಿಗೆ ನೌಕರರನ್ನು ನೇಮಕ ಮಾಡುವ ಪದ್ಧತಿಯನ್ನು ಕೈಬಿಡಬೇಕು. ಪದವಿ ಪೂರೈಸಿದ ವಿದ್ಯಾರ್ಥಿಗಳಿಗೆ ಅವರ ವಿದ್ಯಾರ್ಹತೆಗೆ ಅನುಗುಣವಾಗಿ ಉದ್ಯೋಗ ಒದಗಿಸಬೇಕು. ಸಫಾಯಿ ಕರ್ಮಚಾರಿಗಳನ್ನು ಕಾಯಂ ಆಗಿ ನೇಮಕ ಮಾಡಬೇಕು ಎಂದು ಆಗ್ರಹಿಸಿದರು.

ರೈತ ವಿರೋಧಿ ನೀತಿಯನ್ನು ತಕ್ಷಣ ಕೈಬಿಡಬೇಕು ಎಂದು ಒತ್ತಾಯಿಸಿದರು. ಭೀಮ್‌ ಆರ್ಮಿ ಜಿಲ್ಲಾ ಘಟಕದ ಅಧ್ಯಕ್ಷ ಅಂಬರೀಷ್ ಕುದರೆ, ಜಿಲ್ಲಾ ಘಟಕದ ಉಪಾಧ್ಯಕ್ಷ ರಜನಿಕಾಂತ ನಿಜಾಂಪೂರೆ, ವಿಭಾಗೀಯ ಅಧ್ಯಕ್ಷ ಪ್ರಮೋದಕುಮಾರ ಶಿಂಧೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋವಿಂದ ಬಡಿಗೇರ್, ಮಹೇಶ ಬುಧೇರಾ, ಗೌತಮ ಮೇತ್ರೆ, ಪ್ರದೀಪ ಮೇತ್ರೆ, ಗೌತಮ ಬಗದಲಕರ್, ನಾಗೇಶ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT