ಬೀದರ್: ಇತ್ತೀಚೆಗೆ ನಿಧನರಾದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಮಾಜಿ ಅಧ್ಯಕ್ಷ, ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರ ಗೌರವಾರ್ಥ ಶನಿವಾರ (ಫೆ.14) ಸಂಜೆ 5.30ಕ್ಕೆ ಬೆಂಗಳೂರಿನ ಅರಮನೆ ಆವರಣದ ಗೇಟ್ 4ರಲ್ಲಿರುವ ಗಾಯತ್ರಿ ವಿಹಾರದಲ್ಲಿ ನುಡಿನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರೂ ಆದ ಬೀದರ್ ಜಿಲ್ಲಾ ಉಸ್ತುವಾರಿ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.
.ಚನ್ನಬಸವ ಪಟ್ಟದೇವರು, ಭೀಮಣ್ಣ ಖಂಡ್ರೆ ಒಂದೇ ನಾಣ್ಯದ ಮುಖಗಳು: ಸಾಹಿತಿ ಸೋಮನಾಥ.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮತ್ತು ಭಾಲ್ಕಿಯ ಶಾಂತಿವರ್ಧಕ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸುತ್ತೂರು ಸಂಸ್ಥಾನದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ತರಳಬಾಳು ಬೃಹನ್ಮಠದ ಶಿವಮೂರ್ತಿ ಶಿವಾಚಾರ್ಯರು, ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ, ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಸಾನ್ನಿಧ್ಯ ವಹಿಸಲಿದ್ದಾರೆ ಎಂದು ಮಂಗಳವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಭಾಧ್ಯಕ್ಷ ಯು.ಟಿ. ಖಾದರ್, ಸಭಾಪತಿ ಬಸವರಾಜ ಹೊರಟ್ಟಿ, ಕೇಂದ್ರ ಸಚಿವ ವಿ.ಸೋಮಣ್ಣ, ಮಾಜಿ ಮುಖ್ಯಮಂತ್ರಿಗಳಾದ ಎಂ. ವೀರಪ್ಪ ಮೊಯ್ಲಿ, ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ನುಡಿನಮನ ಸಲ್ಲಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
.ಬೀದರ್: ಚಿರನಿದ್ರೆಗೆ ಜಾರಿದ ಭೀಮಣ್ಣ ಖಂಡ್ರೆ, ಪತ್ನಿ ಸಮಾಧಿ ಬಳಿಯೇ ಅಂತ್ಯಸಂಸ್ಕಾರ.
ರಾಜ್ಯ ಸಚಿವ ಸಂಪುಟದ ಎಲ್ಲ ಸಹೋದ್ಯೋಗಿಗಳು, ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ಮಹಾಸಭಾದ ವಿವಿಧ ರಾಜ್ಯ ಘಟಕಗಳ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದೂ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರೂ ಆದ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಭೀಮಣ್ಣ ಖಂಡ್ರೆ ಅವರು ಸಭಾಕ್ಕೆ ಸ್ವಂತ ನಿವೇಶನ ಖರೀದಿಸಿ, ಭವ್ಯ ಕಟ್ಟಡ ನಿರ್ಮಿಸಿ ಸಭಾ ಸ್ವಾವಲಂಬಿಯಾಗುವಂತೆ ಮಾಡಿದ್ದರು. ಸಮಾಜಕ್ಕೆ ಭೀಮಣ್ಣ ಖಂಡ್ರೆ ಅವರು ನೀಡಿರುವ ಕೊಡುಗೆ ಅಪಾರವಾಗಿದ್ದು, ಸಮಾಜದ ಎಲ್ಲ ಬಾಂಧವರೂ ಈ ನುಡಿನಮನ ಕಾರ್ಯಕ್ರಮದಲ್ಲಿ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಪಾಲ್ಗೊಳ್ಳುತ್ತಾರೆ ಎಂದೂ ಹೇಳಿದ್ದಾರೆ.
.ಬಸವಕಲ್ಯಾಣ ಜನರಿಗೆ `ಭೀಮಬಲ' ಆಗಿದ್ದ ಭೀಮಣ್ಣ ಖಂಡ್ರೆ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.