ಶುಕ್ರವಾರ, 23 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೀಮಣ್ಣ ಖಂಡ್ರೆ ಶತಮಾನೋತ್ಸವದಲ್ಲಿ ಸಿಎಂ ಭಾಗಿ: ಗುರಮ್ಮಾ ಸಿದ್ದಾರೆಡ್ಡಿ

Published 27 ನವೆಂಬರ್ 2023, 14:28 IST
Last Updated 27 ನವೆಂಬರ್ 2023, 14:28 IST
ಅಕ್ಷರ ಗಾತ್ರ

ಬೀದರ್‌: ‘ಡಿಸೆಂಬರ್‌ 2ರಂದು ಭಾಲ್ಕಿ ಪಟ್ಟಣದಲ್ಲಿ ಹಮ್ಮಿಕೊಂಡಿರುವ ಮಾಜಿ ಸಚಿವ ಭೀಮಣ್ಣ ಖಂಡ್ರೆ ಜನ್ಮ ಶತಮಾನೋತ್ಸವ ಹಾಗೂ ಅಭಿನಂದನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ’ ಎಂದು ಅಖಿಲ ಭಾರತೀಯ ವೀರಶೈವ ಮಹಾಸಭೆ ರಾಷ್ಟ್ರೀಯ ಉಪಾಧ್ಯಕ್ಷೆ ಡಾ.ಗುರಮ್ಮ ಸಿದ್ದಾರೆಡ್ಡಿ ತಿಳಿಸಿದರು.

ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,‘ಮಲ್ಲಿಕಾರ್ಜುನ ಖರ್ಗೆಯವರು ಕಾರ್ಯಕ್ರಮ ಉದ್ಘಾಟಿಸುವರು. ಸಿದ್ದರಾಮಯ್ಯನವರು ಅಭಿನಂದನಾ ಗ್ರಂಥ ಬಿಡುಗಡೆಗೊಳಿಸುವರು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಾಕ್ಷ್ಯಚಿತ್ರ ಬಿಡುಗಡೆ ಮಾಡುವರು’ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಸುತ್ತೂರು, ತರಳಬಾಳು, ಶ್ರೀಶೈಲ, ತುಮಕೂರು, ಭಾಲ್ಕಿ, ಹುಬ್ಬಳ್ಳಿ ಮೂರು ಸಾವಿರ ಮಠದ ಸ್ವಾಮೀಜಿ, ಶರಣಬಸವಪ್ಪ ಅಪ್ಪ ಸೇರಿದಂತೆ ಇತರೆ ಮಠಾಧೀಶರು ಭಾಗವಹಿಸುವರು. ‌‌ಮಾಜಿ ಮುಖ್ಯಮಂತ್ರಿಗಳಾದ ಎಂ.ವೀರಪ್ಪ ಮೊಯ್ಲಿ, ಸುಶೀಲಕುಮಾರ ಶಿಂಧೆ, ಅಖಿಲ ಭಾರತ ವೀರಶೈವ ಮಹಾಸಭೆ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ, ಅಖಿಲ ಭಾರತೀಯ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಗೊ.ರು ಚನ್ನಬಸಪ್ಪ, ಮಹಾಸಭೆಯ ರಾಜ್ಯ ಅಧ್ಯಕ್ಷ ಎನ್.ತಿಪ್ಪಣ್ಣ, ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ ಸೇರಿದಂತೆ ರಾಜ್ಯದ ಹಲವು ಸಚಿವರು, ಶಾಸಕರು ಭಾಗವಹಿಸುವರು ಎಂದು ವಿವರಿಸಿದರು.

ಕಿತ್ತೂರು ರಾಣಿ ಚನ್ನಮ್ಮ ಮಹಿಳಾ ಮಂಡಳದ ಪ್ರೊ.ಲೀಲಾವತಿ ಚಾಕೋತೆ ಹಾಗೂ ಪುಣ್ಯವತಿ ವಿಸಾಜಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT