ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೀಮಣ್ಣ ಖಂಡ್ರೆ ಶತಮಾನೋತ್ಸವ: ಸುತ್ತೂರು ಶ್ರೀಗೆ ಆಹ್ವಾನ

Published 16 ನವೆಂಬರ್ 2023, 14:47 IST
Last Updated 16 ನವೆಂಬರ್ 2023, 14:47 IST
ಅಕ್ಷರ ಗಾತ್ರ

ಭಾಲ್ಕಿ: ಸ್ವಾತಂತ್ರ್ಯ ಹೋರಾಟಗಾರ ಭೀಮಣ್ಣ ಖಂಡ್ರೆ ಅವರ ಶತಮಾನೋತ್ಸವ ಮತ್ತು ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭಕ್ಕೆ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರದ ಸ್ವಾಮೀಜಿಗೆ ಆಹ್ವಾನ ನೀಡಲಾಗಿದೆ.

ಬೆಂಗಳೂರಿನಲ್ಲಿ ಗುರುವಾರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ನೇತೃತ್ವದಲ್ಲಿ ಸ್ವಾಮೀಜಿಗೆ ಭೇಟಿಯಾಗಿ, ಭಾಲ್ಕಿ ಪಟ್ಟಣದಲ್ಲಿ ಡಿ.2ರಂದು ಡಾ.ಭೀಮಣ್ಣ ಖಂಡ್ರೆ ಅವರ ಶತಮಾನೋತ್ಸವ ಕಾರ್ಯಕ್ರಮ ನಡೆಯಲಿದೆ. ತಾವುಗಳು ಆ ಸಮಾರಂಭದ ಸಾನ್ನಿಧ್ಯ ವಹಿಸಿ ಭೀಮಣ್ಣ ಖಂಡ್ರೆ ಅವರ ಜತೆಗೆ ಜಿಲ್ಲೆಯ ಭಕ್ತರನ್ನು ಆಶೀರ್ವದಿಸಬೇಕು ಎಂದು ಕೋರಲಾಗಿದೆ.

ಬಸವಕಲ್ಯಾಣದಲ್ಲಿ ನ.25 ಮತ್ತು 26ರಂದು ಜರುಗಲಿರುವ 44ನೇ ಶರಣ ಕಮ್ಮಟ, ಅನುಭವ ಮಂಟಪ ಉತ್ಸವ ಮತ್ತು ಡಿ.2ರಂದು ನಡೆಯುವ ಭೀಮಣ್ಣ ಖಂಡ್ರೆ ಅವರ ಶತಮಾನೋತ್ಸವ ಸಮಾರಂಭದಲ್ಲಿ ಸುತ್ತೂರು ಸ್ವಾಮೀಜಿ ಭಾಗಿಯಾಲಿದ್ದಾರೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ, ರವೀಂದ್ರ ಚಿಡಗುಪ್ಪೆ, ಭಾತಂಬ್ರಾ ಗ್ರಾ.ಪಂ ಮಾಜಿ ಉಪಾಧ್ಯಕ್ಷ ಮಹಾದೇವ ಬೇಲೂರೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT