ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚಿಟ್ಟಾವಾಡಿ: ಶಾಲಾ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಶಾಸಕ

Published 30 ಜೂನ್ 2024, 14:28 IST
Last Updated 30 ಜೂನ್ 2024, 14:28 IST
ಅಕ್ಷರ ಗಾತ್ರ

ಚಿಟ್ಟಾವಾಡಿ(ಜನವಾಡ): ಬೀದರ್ ತಾಲ್ಲೂಕಿನ ಚಿಟ್ಟಾವಾಡಿ ಸಮೀಪ ಫ್ಲೋರಾ ಪಬ್ಲಿಕ್ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಬೀದರ್ ದಕ್ಷಿಣ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಭಾನುವಾರ ಭೂಮಿ ಪೂಜೆ ನೆರವೇರಿಸಿದರು.

ವಿದ್ಯಾರ್ಥಿಗಳಿಗೆ ಶಾಲೆ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ. ಶಾಲೆಯ ಕಟ್ಟಡಕ್ಕೆ ಶಾಸಕರ ನಿಧಿಯಿಂದ ₹ 5 ಲಕ್ಷ ಅನುದಾನ ಕೊಡಲಾಗುವುದು ಎಂದು ತಿಳಿಸಿದರು.

ಶಾಲೆಯ ಕಾರ್ಯದರ್ಶಿ ದತ್ತಾತ್ರೇಯ ಬಿರಾದಾರ, ಮುಖ್ಯಶಿಕ್ಷಕಿ ಸುವರ್ಣಾ ಬಿರಾದಾರ ಮಾತನಾಡಿದರು.

ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಶ್ರೀಕಾಂತ ಚಿಮಕೋಡೆ, ಅಮಲಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಖೈರುನಾ ಬೇಗಂ, ತಾತ್ಯಾರಾವ್ ಪಾಟೀಲ, ಗೋಪಾಲರಾವ್ ಪಾಟೀಲ, ಸಂಜೀವಕುಮಾರ ಪಾಟೀಲ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT