ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್: ರೋಟರಿ ಕ್ಲಬ್‌ನಿಂದ ವಿದ್ಯಾರ್ಥಿನಿಯರಿಗೆ ಬೈಸಿಕಲ್‌

Published 9 ಜನವರಿ 2024, 15:30 IST
Last Updated 9 ಜನವರಿ 2024, 15:30 IST
ಅಕ್ಷರ ಗಾತ್ರ

ಬೀದರ್: ರೋಟರಿ ಕ್ಲಬ್ ಬೀದರ್ ಫೋರ್ಟ್ ವತಿಯಿಂದ ನಗರದಲ್ಲಿ ಇತ್ತೀಚೆಗೆ ಜಿಲ್ಲೆಯ ವಿವಿಧ ಪ್ರೌಢಶಾಲೆಗಳ 15 ವಿದ್ಯಾರ್ಥಿನಿಯರಿಗೆ ಉಚಿತ ಸೈಕಲ್‌ ವಿತರಿಸಲಾಯಿತು.

ಅಂತರರಾಷ್ಟ್ರೀಯ ರೋಟರಿ ಜಿಲ್ಲೆ 3160 ಗವರ್ನರ್ ಮಾಣಿಕ ಎಸ್. ಪವಾರ್ ಮಾತನಾಡಿ, ರೋಟರಿ ಸಂಸ್ಥೆ ಮಹಿಳಾ ಶಿಕ್ಷಣಕ್ಕೆ ಉತ್ತೇಜನ ನೀಡಲು ವಿವಿಧ ಕಾರ್ಯಕ್ರಮಗಳನ್ನು ರೋಟರಿ ಕ್ಲಬ್‌ ಹಾಕಿಕೊಂಡಿದೆ. ವಿದ್ಯಾರ್ಥಿನಿಯರು ಶಾಲೆಗಳಿಗೆ ತೆರಳಲು ಅನುಕೂಲ ಮಾಡಿಕೊಡುವುದಕ್ಕಾಗಿ ‘ಗರ್ಲ್ಸ್‌ ಆನ್ ವೀಲ್ಸ್‌’ ಯೋಜನೆಯಡಿ ಉಚಿತ ಬೈಸಿಕಲ್ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.

ಕ್ಲಬ್ ಅಧ್ಯಕ್ಷ ಸಂಗಮೇಶ ಆಣದೂರೆ ಮಾತನಾಡಿ, ಬೆಳ್ಳಿ ಹಬ್ಬದ ಸಂಭ್ರಮದಲ್ಲಿರುವ ಕ್ಲಬ್‍ನಿಂದ ವರ್ಷವಿಡೀ ವಿವಿಧ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಶಿಕ್ಷಣ, ಆರೋಗ್ಯ, ಪರಿಸರ ಮೊದಲಾದ ಕ್ಷೇತ್ರಗಳಲ್ಲಿ ವಿವಿಧ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಗ್ರಾಮೀಣ ಭಾಗದ ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ನೆರವಾಗಲು ರೋಟರಿ ಸಂಸ್ಥೆ ವಿವಿಧ ಯೋಜನೆಗಳನ್ನು ಹಾಕಿಕೊಂಡಿದೆ. ಇದರ ಅಂಗವಾಗಿ ಬೀದರ್‌ನ ಎಂಟು ರೋಟರಿ ಕ್ಲಬ್‍ಗಳಿಂದ ಜಿಲ್ಲೆಯ ಪ್ರೌಢಶಾಲೆಗಳ ವಿದ್ಯಾರ್ಥಿನಿಯರಿಗೆ 180 ಬೈಸಿಕಲ್ ಉಚಿತವಾಗಿ ವಿತರಿಸಲಾಗುತ್ತಿದೆ ರೋಟರಿ ಸೆವೆನ್ ಏರಿಯಾಸ್ ಆಫ್ ಫೋಕಸ್ ಜಿಲ್ಲಾ ಅಧ್ಯಕ್ಷ ಬಸವರಾಜ ಧನ್ನೂರ ತಿಳಿಸಿದರು.

ರೋಟರಿ ಕಲ್ಯಾಣ ಝೋನ್ ಅಸಿಸ್ಟೆಂಟ್‌ ಗವರ್ನರ್ ಡಾ. ವಸಂತ ಪವಾರ್, ಜಿಲ್ಲಾ ಕಾರ್ಯದರ್ಶಿ ಶಿವಕುಮಾರ ಯಲಾಲ್, ಕ್ಲಬ್ ಕಾರ್ಯದರ್ಶಿ ಗುಂಡಪ್ಪ ಘೋದೆ, ಜಹೀರ್ ಅನ್ವರ್, ಡಾ. ಸುಭಾಷ್ ಬಶೆಟ್ಟಿ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT