ಬೀದರ್: ತಾಲ್ಲೂಕಿನ ಚಿಟ್ಟಾವಾಡಿಯ ಆಶ್ರಯ ಮನೆಗಳಿಗೆ ಮೂಲಸೌಕರ್ಯ ಒದಗಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಒತ್ತಾಯಿಸಿದೆ.

ಸಂಘಟನೆಯ ಜಿಲ್ಲಾ ಸಂಚಾಲಕ ಕಲ್ಯಾಣರಾವ್ ನೇತೃತ್ವದಲ್ಲಿ ಪದಾಧಿಕಾರಿಗಳು ಗುರುವಾರ ನಗರಸಭೆಯ ಆಯುಕ್ತ ಬಸಪ್ಪ ಅವರಿಗೆ ಮನವಿ ಸಲ್ಲಿಸಿದರು.

ಆಶ್ರಯ ಮನೆಗಳಲ್ಲಿ ಕೂಲಿ ಕಾರ್ಮಿಕರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನರು ವಾಸಿಸುತ್ತಿದ್ದಾರೆ. ಇಲ್ಲಿಯ ಮನೆಗಳಿಗೆ ಸಮರ್ಪಕವಾದ ವಿದ್ಯುತ್ ಪೂರೈಕೆಯಾಗುತ್ತಿಲ್ಲ. ನೀರು, ಗಟಾರ, ಸರಿಯಾದ ರಸ್ತೆ ಸೌಕರ್ಯ ಇಲ್ಲ ಎಂದು ತಿಳಿಸಿದರು.

ಬೇಡ ಜಂಗಮರಿಗೆ ಸುಳ್ಳು ಜಾತಿ ಪ್ರಮಾಣ ಪತ್ರ ವಿತರಿಸಿದ ತಹಶೀಲ್ದಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿಪತ್ರ ಸಲ್ಲಿಸಿದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಸಂಚಾಲಕ ಕಲ್ಯಾಣರಾವ್ ಭೋಸ್ಲೆ, ದಲಿತ ವಿದ್ಯಾರ್ಥಿ ಒಕ್ಕೂಟದ ಜಿಲ್ಲಾ ಸಂಚಾಲಕ ಅಶೋಕ ಸಂಗಮ, ಸಮಿತಿ ಸಂಘಟನಾ ಸಂಚಾಲಕರಾದ ರಮೇಶ ಕಾಳೇಕರ್, ಕಂಟೆಪ್ಪ ಗುಮ್ಮೆ, ರಘುನಾಥ ಕಾಂಬಳೆ, ತಾಲ್ಲೂಕು ಸಂಚಾಲಕರಾದ ಸಂಜು ಮೇತ್ರೆ, ಸಂಜು ಲಾಧಾ, ಸೈಯದ್ ಆಸೀಫ್ ಹಾಗೂ ನಗರ ಸಂಚಾಲಕ ಗೌತಮ ಅಮಲಾಪೂರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.