ಬೀದರ್: ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಕಾಂಗ್ರೆಸ್ ಪಕ್ಷವು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರೂ ಆದ ಶಾಸಕ ಈಶ್ವರ ಖಂಡ್ರೆ ಅವರ ನೇತೃತ್ವದಲ್ಲಿ ಭಾಲ್ಕಿ ಪಟ್ಟಣದಲ್ಲಿ ಶನಿವಾರ (ಆ. 13) ಬಲಿಷ್ಠ ಭಾರತಕ್ಕಾಗಿ 15 ಕಿ.ಮೀ. ಕಾಲ್ನಡಿಗೆ ಜಾಥಾ ಹಮ್ಮಿಕೊಂಡಿದೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ ತಿಳಿಸಿದ್ದಾರೆ.

ಬಿ.ಕೆ.ಐ.ಟಿ.ಯಿಂದ ಆರಂಭವಾಗುವ ಜಾಥಾ ಪಟ್ಟಣದ ಪ್ರಮುಖ ಬೀದಿ, ಎಲ್ಲ ವಾರ್ಡ್‍ಗಳ ಮೂಲಕ ಸಾಗಿ ಗಾಂಧಿ ವೃತ್ತದಲ್ಲಿ ಸಮಾರೋಪಗೊಳ್ಳಲಿದೆ ಎಂದು ಹೇಳಿದ್ದಾರೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಡಾ. ಶರಣಪ್ರಕಾಶ ಪಾಟೀಲ, ಪ್ರಧಾನ ಕಾರ್ಯದರ್ಶಿಗಳಾದ ಗೀತಾ ಚಿದ್ರಿ, ಮೀನಾಕ್ಷಿ ಸಂಗ್ರಾಮ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಶಾಸಕರಾದ ರಾಜಶೇಖರ ಪಾಟೀಲ, ರಹೀಂಖಾನ್, ವಿಧಾನ ಪರಿಷತ್ ಸದಸ್ಯರಾದ ಅರವಿಂದಕುಮಾರ ಅರಳಿ, ಚಂದ್ರಶೇಖರ ಪಾಟೀಲ, ಭೀಮರಾವ್ ಪಾಟೀಲ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ಪಕ್ಷದ ಮುಖಂಡರು, ಚುನಾಯಿತ ಪ್ರತಿನಿಧಿಗಳು, ಜಿಲ್ಲಾ, ತಾಲ್ಲೂಕು, ಮುಂಚೂಣಿ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಜಾಥಾ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.