ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಜೆಜೆಎಂ ಅವ್ಯವಹಾರ ತನಿಖೆಗೆ ಆಗ್ರಹಿಸಿ ಧರಣಿ

Published 18 ಜನವರಿ 2024, 14:57 IST
Last Updated 18 ಜನವರಿ 2024, 14:57 IST
ಅಕ್ಷರ ಗಾತ್ರ

ಬಸವಕಲ್ಯಾಣ: ‘ತಾಲ್ಲೂಕಿನ ಇಸ್ಲಾಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಾಗೂ ಇತರೆ ಗ್ರಾಮಗಳಲ್ಲಿ ಜೆಜೆಎಂ ಕಾಮಗಾರಿ ಕಳಪೆ ಮಟ್ಟದಲ್ಲಿ ನಡೆದಿದ್ದು, ಈ ಬಗ್ಗೆ ತನಿಖೆ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ತಾಲ್ಲೂಕು ಬಹುಜನ ಸಮಾಜ ಪಕ್ಷದಿಂದ ತಾಲ್ಲೂಕು ಪಂಚಾಯಿತಿ ಕಚೇರಿ ಎದುರಲ್ಲಿ ಧರಣಿ ನಡೆಸಿ ಮನವಿಪತ್ರ ಸಲ್ಲಿಸಲಾಯಿತು.

‘ಮಂಗಳೂರು, ಶಿವರಾಮ ತಾಂಡಾ, ಹಿರೇನಾಗಾಂವ, ನಾರಾಯಣಪುರ, ಕಿಟ್ಟಾ, ಗುತ್ತಿ ಗ್ರಾಮಗಳಲ್ಲಿನ ಕಾಮಗಾರಿ ಕುಂಟುತ್ತ ಸಾಗಿದೆ. ಆದ್ದರಿಂದ ಸಂಬಂಧಿತ ಜೆಇ ಮೇಲೆ ಕ್ರಮ ತೆಗೆದುಕೊಳ್ಳಬೇಕು. ಕೆಲಸ ಪೂರ್ಣಗೊಳ್ಳದಿದ್ದರೂ ಈ ಕಾರ್ಯಕ್ಕೆ ಕೆಲ ಪಂಚಾಯಿತಿ ಅಧಿಕಾರಿಗಳು ಮತ್ತು ಸದಸ್ಯರು ಸಹಕಾರ ನೀಡಿದ್ದಾರೆ. ಅವರ ಮೇಲೆ ಕ್ರಮ ತೆಗೆದುಕೊಳ್ಳಬೇಕು’ ಎಂದು ಸಹ ಆಗ್ರಹಿಸಲಾಯಿತು.

ಬಹುಜನ ಸಮಾಜ ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಶಂಕರ ಫುಲೆ, ಜಿಲ್ಲಾ ಉಪಾಧ್ಯಕ್ಷ ಅಶೋಕ ಮಂಠಾಳಕರ್, ಮಹಾದೇವ ಗಾಯಕವಾಡ, ದತ್ತು ಸುಂಠಾಣೆ, ಚೇತನ ಕಾಡೆ, ವಿಷ್ಣುಕಾಂತ ಸೂರ್ಯವಂಶಿ, ಅಶೋಕ ಶಿಂಧೆ, ರೋಷನ ಜವಾಹರ, ಸಚಿನ್‌ ಕಾಂಬಳೆ, ಸಂದೀಪ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT