ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಯುವಕರು ಉದ್ಯಮ ಕ್ಷೇತ್ರಕ್ಕೆ ಬರಲಿ’

Last Updated 27 ಫೆಬ್ರುವರಿ 2020, 15:35 IST
ಅಕ್ಷರ ಗಾತ್ರ

ಬೀದರ್: ‘ಉದ್ಯಮ ಆರಂಭಿಸಲು ಸರ್ಕಾರದ ಹಲವು ಯೋಜನೆಗಳು ಇವೆ. ಕೆಲವೇ ಮಂದಿ ಎಲ್ಲ ಯೋಜನೆಗಳ ಫಲಾನುಭವಿಗಳಾಗುತ್ತಿದ್ದಾರೆ. ಹೆಚ್ಚು ಹೆಚ್ಚು ಯುವಕರು ಉದ್ಯಮ ಕ್ಷೇತ್ರಕ್ಕೆ ಬರಬೇಕು’ ಎಂದು ಜಿಲ್ಲಾಧಿಕಾರಿ ಎಚ್.ಆರ್. ಮಹಾದೇವ ಹೇಳಿದರು.

ಕೇಂದ್ರ ಸರ್ಕಾರದ ಕಿರು, ಸಣ್ಣ, ಮಧ್ಯಮ ಕೈಗಾರಿಕೆಗಳ ಅಭಿವೃದ್ಧಿ ಸಂಸ್ಥೆ, ಜಿಲ್ಲಾ ಕೈಗಾರಿಕಾ ತರಬೇತಿ ಕೇಂದ್ರ, ಡಿಸಿಸಿ ಬ್ಯಾಂಕ್‌ನ ಸಹಾರ್ದ ತರಬೇತಿ ಕೇಂದ್ರ, ಬಿದ್ರಿ ಮತ್ತು ಜರ್ದೋಸಿ ಕ್ಲಸ್ಟರ್ ಗುರುವಾರ ಇಲ್ಲಿಯ ಸಹಾರ್ದ ತರಬೇತಿ ಕೇಂದ್ರದಲ್ಲಿ ಗುರುವಾರ ಆಯೋಜಿಸಿದ್ದ ರಫ್ತು ಉದ್ಯಮ ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಜಿಲ್ಲೆಯಲ್ಲಿ ಕೈಗಾರಿಕೆಗಳ ಕೊರತೆ ಇರುವ ಕಾರಣ ಉದ್ಯೋಗ ಸೃಷ್ಟಿಯಾಗುತ್ತಿಲ್ಲ. ಕೈಗಾರಿಕೆಗಳು ಹೆಚ್ಚಾದರೆ ನಿರುದ್ಯೋಗಿಗಳಿಗೆ ಉದ್ಯೋಗ ದೊರಕುತ್ತದೆ. ಜಿಲ್ಲೆಯ ಆರ್ಥಿಕ ಅಭಿವೃದ್ಧಿಯೂ ಆಗುತ್ತದೆ’ ಎಂದು ತಿಳಿಸಿದರು.

‘ಜಿಲ್ಲೆಯಲ್ಲಿ ಹೆಚ್ಚೆಚ್ಚು ಬಂಡವಾಳ ಹೂಡಿಕೆ ಹಾಗೂ ಕೈಗಾರಿಕೆಗಳ ಸ್ಥಾಪನೆ ಕುರಿತು ಚರ್ಚಿಸಲು ಕೇಂದ್ರ ಸರ್ಕಾರದ ಅಧಿಕಾರಿಗಳ ನಿಯೋಗ ಬೀದರ್‌ಗೆ ಭೇಟಿ ನೀಡಲಿದೆ’ ಎಂದು ಹೇಳಿದರು.

ಬೆಂಗಳೂರಿನ ವಿದೇಶಿ ರಫ್ತು ವ್ಯಾಪಾರ ಪ್ರಾದೇಶಿಕ ಕೇಂದ್ರದ ಉಪ ಮಹಾ ನಿರ್ದೇಶಕ ಡಾ. ಪುನಂಕುಮಾರ ಮಾತನಾಡಿ, ‘ರಫ್ತು ವ್ಯಾಪಾರ ಉತ್ತೇಜಿಸಲು ಕೇಂದ್ರ ಸರ್ಕಾರ ನಿರ್ಯಾತ ಬಂಧು ಯೋಜನೆಯನ್ನು ಜಾರಿಗೊಳಿಸುತ್ತಿದೆ. ಉದ್ಯಮಿಗಳಿಗೆ ಪ್ರೋತ್ಸಾಹ ನೀಡುತ್ತಿದೆ’ ಎಂದು ತಿಳಿಸಿದರು.

ಧಾರವಾಡದ ವಿಶ್ವೇಶ್ವರಯ್ಯ ವ್ಯಾಪಾರ ಅಭಿವೃದ್ಧಿ ಸಂಸ್ಥೆಯ ಸಹಾಯಕ ನಿರ್ದೇಶಕ ಜಿ. ಪದ್ಮಕಾಂತ, ಬೀದರ್ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಬಿ.ಜಿ. ಶೆಟಕಾರ್, ಡಿಸಿಸಿ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ವಿಠ್ಠಲರೆಡ್ಡಿ ಎಡಮಲ್ಲೆ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕಿ ಸುರೇಖಾ ಮುನೋಳಿ, ಕಲಬುರ್ಗಿಯ ಕಿರು, ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಅಭಿವೃದ್ಧಿ ಸಂಸ್ಥೆಯ ಸಹಾಯಕ ನಿರ್ದೇಶಕ ಬಿ.ಎಸ್. ಜವಳಿ, ರಫ್ತು ಉದ್ಯಮಿ ರಾಹು ಮಹಾಗಾಂವಕರ್ ಮಾತನಾಡಿದರು.

ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಾಯಕ ನಿರ್ದೇಶಕರಾದ ನಾಗಪ್ಪ ರೆಡ್ಡಿ, ರಮೇಶ ಮಠಪತಿ, ರಾಜಕುಮಾರ ಪಾಟೀಲ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ವಿದ್ಯಾನಂದ, ಎಸ್‌ಸಿ, ಎಸ್‌ಟಿ ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷ ವಿಜಯಕುಮಾರ ಉಪಸ್ಥಿತರಿದ್ದರು. ಸಹಾರ್ದ ಸಂಸ್ಥೆಯ ನಿರ್ದೇಶಕ ಸುಬ್ರಹ್ಮಣ್ಯ ಪ್ರಭು ನಿರೂಪಿಸಿದರು. ಎಸ್.ಜಿ. ಪಾಟೀಲ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT