ಮನ್ನಳ್ಳಿ(ಜನವಾಡ): ‘ಆ್ಯಸಿಡ್ ದಾಳಿಯಂಥ ಅಮಾನುಷ ಕೃತ್ಯಗಳ ಸಂತ್ರಸ್ತರಿಗೆ ಕಾನೂನು ನೆರವು ನೀಡುವುದು ಎಲ್ಲರ ಕರ್ತವ್ಯವಾಗಿದೆ’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರೂ ಆದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ್ ಬನಸೋಡೆ ಹೇಳಿದರು.

ಬೀದರ್ ತಾಲ್ಲೂಕಿನ ಮನ್ನಳ್ಳಿ ಗ್ರಾಮದಲ್ಲಿ ಬುಧವಾರ ನಡೆದ ಜಲ ಅರ್ಪಣ ದಿವಸ್ ಹಾಗೂ ಆ್ಯಸಿಡ್ ದಾಳಿ ಸಂತ್ರಸ್ತರಿಗೆ ಕಾನೂನು ಸೇವೆ ನೀಡುವ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ನಲ್ಸಾ 2016ರ ಯೋಜನೆಯಡಿ ಆ್ಯಸಿಡ್ ದಾಳಿ ಸಂತ್ರಸ್ತರಿಗೆ ಉಚಿತ ಕಾನೂನು ನೆರವು ಹಾಗೂ ಸೂಕ್ತ ಪರಿಹಾರ ಒದಗಿಸಲು ಅವಕಾಶ ಇದೆ. ಪ್ರತಿಯೊಬ್ಬರೂ ಈ ಬಗ್ಗೆ ಅರಿವು ಹೊಂದಬೇಕು. ಸಂತ್ರಸ್ತರಲ್ಲಿ ಧೈರ್ಯ ತುಂಬಬೇಕು’ ಎಂದು ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಾಣಿಕರಾವ್ ಪಾಟೀಲ ಮಾತನಾಡಿ, ‘ಜಲ ಜೀವನ ಮಿಷನ್ ಯೋಜನೆಯಡಿ ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ತಲುಪಿಸುವ ಕಾರ್ಯ ಪ್ರಗತಿಯಲ್ಲಿದೆ. ನೀರು ಅಮೂಲ್ಯ ಸಂಪತ್ತಾಗಿದ್ದು, ಅದನ್ನು ವ್ಯರ್ಥ ಮಾಡದೆ, ಹಿತ ಮಿತವಾಗಿ ಬಳಸುವುದು ಹಾಗೂ ಸಂರಕ್ಷಿಸುವುದು ಇಂದಿನ ತುರ್ತು ಅಗತ್ಯವಾಗಿದೆ’ ಎಂದು ಹೇಳಿದರು.

‘ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಸಮಸ್ಯೆ ಪರಿಹಾರಕ್ಕಾಗಿ ಸಹಾಯವಾಣಿ ತೆರೆಯಲಾಗಿದೆ. ಯಾವುದೇ ಗ್ರಾಮದಲ್ಲಿ ನೀರಿನ ಸಮಸ್ಯೆ ಉಂಟಾದರೆ ಸಹಾಯವಾಣಿಗೆ ಕರೆ ಮಾಡಬೇಕು’ ಎಂದು ತಿಳಿಸಿದರು.

ವಕೀಲ ಜಗನ್ನಾಥ ಸೋರಳ್ಳಿ ಉಪನ್ಯಾಸ ನೀಡಿದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಸನ್ಮುಕಯ್ಯ ಬಿ. ಸ್ವಾಮಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗದ ಅಧಿಕಾರಿ ತಿಪ್ಪೇಶಕುಮಾರ, ಜಲ ಜೀವನ ಮಿಷನ್ ಜಿಲ್ಲಾ ಯೋಜನಾ ವ್ಯವಸ್ಥಾಪಕ ಪೇತ್ರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕನಕರಾಯ ಇದ್ದರು.

ತಾಲ್ಲೂಕು ಪಂಚಾಯಿತಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ವಿಶ್ವ ಜಲ ದಿನಾಚರಣೆ ಅಂಗವಾಗಿ ಕಾರ್ಯಕ್ರಮ ಸಂಘಟಿಸಲಾಗಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-33-778452662

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.