ಬೀದರ್: ಶೀಘ್ರ ನಗರದಲ್ಲಿ ‘ಅಗ್ನಿವೀರ್’ ನೇಮಕಾತಿ ರ್ಯಾಲಿ ನಡೆಯಲಿದ್ದು, ಜಿಲ್ಲೆಯ ಹಾಗೂ ಸುತ್ತಲಿನ ಪ್ರದೇಶಗಳ ಸುಮಾರು ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ಈಗಾಗಲೇ ನೇಮಕಾತಿಯಲ್ಲಿ ಭಾಗ ವಹಿಸಲು ಆನ್ಲೈನ್ನಲ್ಲಿ ನೋಂದಣಿ ಮಾಡಿಸಿದ್ದಾರೆ. ಅಭ್ಯರ್ಥಿಗಳ ಅನುಕೂಲ ಕ್ಕಾಗಿ ಮಾರ್ಗದರ್ಶನ ಮತ್ತು ತರಬೇತಿ ಹಮ್ಮಿಕೊಳ್ಳಲಾಗಿದೆ. ನೋಂದಾಯಿತ ಅಭ್ಯರ್ಥಿಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಕುರಿತು ಸಿದ್ಧತೆಗೆ ಸಹಾಯವಾಗುವ ಉದ್ದೇಶ ದಿಂದ ಮೇ 14ರಂದು ಸಂಜೆ 4ಕ್ಕೆ ಬೀದರ್ ನಗರದ ಕೋಟೆ ರಸ್ತೆಯ ಅಗ್ನಿಶಾಮಕ ಕೇಂದ್ರದ ಸಮೀಪದಲ್ಲಿರುವ ಕೆಎಆರ್ ಏರ್ ಸ್ಕ್ವಾಡ್ರನ್ ಎನ್ಸಿಸಿ ಘಟಕದಲ್ಲಿ ತರಬೇತಿ ಹಮ್ಮಿಕೊಳ್ಳಲಾಗಿದೆ.

ಅಗ್ನಿವೀರ್ ನೇಮಕಾತಿ ಪ್ರಕ್ರಿಯೆ, ಪರೀಕ್ಷೆಯ ಮಾದರಿ, ತಯಾರಿ ತಂತ್ರಗಳು ಹಾಗೂ ದೈಹಿಕ ಮತ್ತು ಲಿಖಿತ ಪರೀಕ್ಷೆಗಳ ಕುರಿತು ಸಮಗ್ರ ಮಾಹಿತಿ ನೀಡಲಾಗುವುದು. ಅನುಭವ ಹೊಂದಿದ ಮಾಜಿ ಸೈನಿಕರು ಹಾಗೂ ತಜ್ಞರು ಅಭ್ಯರ್ಥಿಗಳಿಗೆ ಮಾರ್ಗದರ್ಶನ ನೀಡಲಿದ್ದಾರೆ. ಎಲ್ಲಾ ನೋಂದಾಯಿತ ಅಭ್ಯರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಅಧ್ಯಕ್ಷ ರಾಜಕುಮಾರ ಲದ್ದೆ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-33-1038862888

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.