ಬೀದರ್: ‘ಸರ್ಕಾರದ ನಿರ್ದೇಶನ ಹಾಗೂ ಜಿಲ್ಲಾಧಿಕಾರಿ ಕಾಲಕಾಲಕ್ಕೆ ನಿಗದಿಪಡಿಸಿದ ಪ್ರಕಾರ ಅಂಗನವಾಡಿ ಕೇಂದ್ರಗಳಿಗೆ ಗುಣಮಟ್ಟದ ಆಹಾರ ಸಾಮಗ್ರಿ ಸರಬರಾಜು ಮಾಡಲಾಗುತ್ತಿದೆ’ ಎಂದು ಸಂತಪುರ (ಔರಾದ್) ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸೋಮವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಸದರಿ ಆದೇಶದಲ್ಲಿ ನಿಗದಿಪಡಿಸಿರುವ ದರದಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಆಹಾರ ಸಾಮಗ್ರಿಗಳನ್ನು ಎಮ್.ಎಸ್.ಪಿ.ಸಿ. ಕೇಂದ್ರಗಳಿಂದ ಖರೀದಿಸಲು ಸೂಚಿಸಲಾಗಿದೆ. ಕಲಬುರಗಿ ವಿಭಾಗದ ವಿಭಾಗೀಯ ಆಹಾರ ಪ್ರಯೋಗಾಲಯದ ಮುಖ್ಯ ಆಹಾರ ವಿಶ್ಲೇಷಕರಿಂದ ಪ್ರತಿ ತಿಂಗಳು ವಿಶ್ಲೇಷಣೆ ಮಾಡಿಸಿ ಆಹಾರ ಸಾಮಗ್ರಿಗಳು ಉತ್ತಮ ಗುಣಮಟ್ಟ ಎಂದು ಖಾತ್ರಿಯಾದ ನಂತರವೇ ಅಂಗನವಾಡಿ ಕೇಂದ್ರಗಳಿಗೆ ಸರಬರಾಜು ಮಾಡಲಾಗುತ್ತದೆ’ ಎಂದು ಸ್ಪಷ್ಟಪಡಿಸಿದ್ದಾರೆ.

ಅಂಗನವಾಡಿ ಕೇಂದ್ರಗಳಿಗೆ ಸರಬರಾಜು ಮಾಡಲಾದ ಆಹಾರ ಸಾಮಗ್ರಿಗಳನ್ನು ಸುಂದ್ರಮ್ಮ ಟ್ರೇಡಿಂಗ್ ಕಂಪನಿಯವರಿಂದ ಖರೀದಿಸುವಂತೆ ಶಾಸಕರಿಂದ ಯಾವುದೇ ನಿರ್ದೇಶನ ಈ ಕಚೇರಿಗೆ ಸ್ವೀಕೃತವಾಗಿರುವುದಿಲ್ಲ. ಪ್ರಭು ಟ್ರೇಡರ್ಸ್ ಮತ್ತು ಸುಂದ್ರಮ್ಮ ಟ್ರೇಡಿಂಗ್ ಕಂಪನಿ ನಡುವಿನ ವ್ಯವಹಾರದ ಬಗ್ಗೆ ಕಚೇರಿಗೆ ಯಾವುದೇ ಸಂಬಂಧ ಇಲ್ಲ’ ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-33-456657709

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.