ಬೀದರ್: ಪ್ರಜಾಪಿತಾ ಬ್ರಹ್ಮಕುಮಾರಿಸ್ ಈಶ್ವರೀಯ ವಿಶ್ವವಿದ್ಯಾಲಯದ ಪಾವನಧಾಮ ಬೀದರ್ ವತಿಯಿಂದ ‘ನಶಾ ಮುಕ್ತ ಭಾರತ ಅಭಿಯಾನ’ ಯಶಸ್ವಿಯಾಗಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ನಗರದ ಪಾಪನಾಶ ಗೇಟ್ನ ಸಾಯಿ ರಾಮ ಸಮರ್ಥ ಫಂಕ್ಷನ್ ಹಾಲ್ನಲ್ಲಿ ಅಭಿನಂದನಾ ಸಮಾರಂಭ ನಡೆಯಿತು.

ಕಾರ್ಯಕ್ರಮಕ್ಕೆ ಬ್ರಹ್ಮಕುಮಾರಿಸ್ ಪಾವನಧಾಮ ಸಂಸ್ಥೆಯ ಜಿಲ್ಲಾ ಮುಖ್ಯಸ್ಥೆ ಬಿ.ಕೆ. ಪ್ರತಿಮಾ ಬಹೆನಜಿ ಸಾನ್ನಿಧ್ಯ ವಹಿಸಿದ್ದರು. ಕಾರ್ಯಕ್ರಮವು ನಶಾಮುಕ್ತಿ ಪ್ರತಿಜ್ಞಾ ವಿಧಿ ಸ್ವೀಕಾರದೊಂದಿಗೆ ಆರಂಭವಾಯಿತು.

ಪೌರಾಡಳಿತ ಮತ್ತು ಹಜ್ ಸಚಿವ ರಹೀಮ್ ಖಾನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ‘ನಶೆ ಇಂದಿನ ಸಮಾಜಕ್ಕೆ ಗಂಭೀರ ಸವಾಲಾಗಿದೆ. ಅದು ವ್ಯಕ್ತಿಯ ಬದುಕಿನಷ್ಟೇ ಅಲ್ಲದೆ ಕುಟುಂಬ ಹಾಗೂ ಸಮಾಜದ ಮೇಲೂ ದುಷ್ಪರಿಣಾಮ ಬೀರುತ್ತದೆ’ ಎಂದು ಹೇಳಿದರು.

‘ನಶೆಗೆ ಒಳಗಾದ ವ್ಯಕ್ತಿ ತನ್ನ ಜವಾಬ್ದಾರಿಗಳನ್ನು ಮರೆತು ಕುಟುಂಬದಲ್ಲಿ ಆರ್ಥಿಕ ಸಂಕಷ್ಟ ಹಾಗೂ ಮಾನಸಿಕ ಒತ್ತಡ ಉಂಟುಮಾಡುತ್ತಾನೆ. ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಇದರ ಪರಿಣಾಮ ಇನ್ನಷ್ಟು ಗಂಭೀರವಾಗಿದೆ. ಹೀಗಾಗಿ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡು ನಶೆಯಿಂದ ದೂರವಿರುವುದು ಪ್ರತಿಯೊಬ್ಬರ ಕರ್ತವ್ಯ’ ಎಂದರು.

ಬ್ರಹ್ಮಾಕುಮಾರಿಸ್ ಪ್ರಧಾನ ಕೇಂದ್ರ ಮೌಂಟ್ ಅಬುವಿನ ವೈದ್ಯಕೀಯ ವಿಭಾಗದ ಅಧ್ಯಕ್ಷರು ಹಾಗೂ ಅಭಿಯಾನದ ನಿರ್ದೇಶಕ ಡಾ. ಬನಾರಸಿಲಾಲ್ ಶಾ ಮಾತನಾಡಿ, ‘ನಶಾ ಮುಕ್ತ ಭಾರತ ಅಭಿಯಾನ ದೇಶದಾದ್ಯಂತ ವ್ಯಾಪಕವಾಗಿ ಹರಡಿದ್ದು ಈಗಾಗಲೇ ಸುಮಾರು 4 ಕೋಟಿಗೂ ಹೆಚ್ಚು ಜನರಿಗೆ ತಲುಪಿದೆ’ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪಶುವೈದ್ಯಕೀಯ ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಡಾ. ಶಿವಕ್ರಕಾಶ, ಬೀದರ ವಿಶ್ವವಿದ್ಯಾಲಯದ ವಿಶೇಷಾಧಿಕಾರಿ ರವೀಂದ್ರ ಗಬಾಡೆ, ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಪೂರ್ಣಿಮಾ ಜಾರ್ಜ್, ಎಚ್ಕೆಇ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಡಾ. ರಾಜನೀಶ ಎಸ್. ವಾಲಿ, ಬಸವರಾಜ ಜಿ. ಪಾಟೀಲ್, ರಾಜಶೇಖರ್ ಸೇಡಂಕರ್ ವೇದಿಕೆಯಲ್ಲಿದ್ದರು.

ಈ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ವ್ಯಸನಮುಕ್ತರಾಗಿರುವ 150ಕ್ಕೂ ಹೆಚ್ಚು ಮಂದಿಯನ್ನು ಸನ್ಮಾನಿಸಿ ಗೌರವಿಸಲಾಯಿತು. ತಮ್ಮ ಜೀವನದಲ್ಲಿ ಸಂಭವಿಸಿದ ಸಕಾರಾತ್ಮಕ ಬದಲಾವಣೆಗಳನ್ನು ಅವರು ಹಂಚಿಕೊಂಡರು.

ಬಿ.ಕೆ. ಗುರುದೇವಿ ಬಹೆನಜಿ ಅತಿಥಿಗಳನ್ನು ಸ್ವಾಗತಿಸಿದರು. ಬಿ.ಕೆ. ರಾಧಾ ಬಹೆನಜಿ ಕಾರ್ಯಕ್ರಮ ನಿರೂಪಿಸಿದರು.

ಬಿ.ಕೆ. ಸುಮನ್ ಬಹೆನಜಿ, ಬಿ.ಕೆ. ಉಷಾ ಬಹೆನಜಿ, ಬಿ.ಕೆ. ಮಂದಾ ಬಹೆನಜಿ ಸೇರಿದಂತೆ ವಿವಿಧ ಸೇವಾ ಕೇಂದ್ರಗಳಿಂದ ಬಂದ ಬ್ರಹ್ಮಾಕುಮಾರಿ ಸಹೋದರರು ಮತ್ತು ಸಹೋದರಿಯರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260331-33-1682800057

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.