ಬೀದರ್: ವಿಶ್ವ ತಂಬಾಕು ನಿಷೇಧ ದಿನಾಚರಣೆಯ ಅಂಗವಾಗಿ ನಗರದ ಬರೀದ್ ಶಾಹಿ ಉದ್ಯಾನದಲ್ಲಿ ಯೋಗ ಸಾಧಕರು ಹಾಗೂ ಹಿರಿಯ ನಾಗರಿಕರು ಸಾಂಕೇತಿಕವಾಗಿ ಸಿಗರೇಟ್ ದಹಿಸುವ ಮೂಲಕ ತಂಬಾಕು ಉತ್ಪನ್ನಗಳ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ರಾಜ್ಯ ಹಿರಿಯ ನಾಗರಿಕರ ಪ್ರಶಸ್ತಿ ಪುರಸ್ಕೃತ ವೀರಭದ್ರಪ್ಪ ಉಪ್ಪಿನ್, ‘ತಂಬಾಕು ಉತ್ಪನ್ನಗಳಾದ ಸಿಗರೇಟ್, ಬೀಡಿ, ಗುಟ್ಕಾ ಸೇರಿದಂತೆ ವಿವಿಧ ಮಾದಕ ಪದಾರ್ಥಗಳ ಸೇವನೆಯಿಂದ ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿದೆ’ ಎಂದು ಹೇಳಿದರು.

‘ತಂಬಾಕು ಉತ್ಪನ್ನಗಳ ಬಳಕೆಯನ್ನು ತಡೆಯುವ ಕುರಿತು ಸರ್ಕಾರಕ್ಕೆ ನಿಜವಾದ ಕಾಳಜಿ ಇದ್ದರೆ ಅವುಗಳ ಉತ್ಪಾದನೆಯನ್ನೇ ನಿಷೇಧಿಸುವ ಧೈರ್ಯಮಯ ನಿರ್ಧಾರ ಕೈಗೊಳ್ಳಬೇಕು. ಜಾಗೃತಿ ಕಾರ್ಯಕ್ರಮಗಳ ಮೂಲಕ ಕೆಲಮಟ್ಟಿನ ಫಲಿತಾಂಶ ದೊರೆತಿದ್ದರೂ, ತಂಬಾಕು ಸೇವನೆಯ ದುಶ್ಚಟ ಸಂಪೂರ್ಣವಾಗಿ ನಿರ್ಮೂಲನೆಯಾಗಿಲ್ಲ. ಸರ್ಕಾರ ಇಚ್ಛಾಶಕ್ತಿ ಪ್ರದರ್ಶಿಸಿ ಉತ್ಪಾದನೆ ನಿಯಂತ್ರಣಕ್ಕೆ ಕ್ರಮ ಕೈಗೊಂಡರೆ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ’ ಎಂದು ಅಭಿಪ್ರಾಯಪಟ್ಟರು.

ಯೋಗ ಮೇಲ್ವಿಚಾರಕ ಗಂಗಪ್ಪ ಸಾವಳೆ ಮಾತನಾಡಿ, ‘ಕುಟುಂಬ ಸದಸ್ಯರು ಹಾಗೂ ಸಮಾಜದಲ್ಲಿ ತಂಬಾಕು ಸೇವನೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸುವ ಸಂಕಲ್ಪವನ್ನು ಎಲ್ಲರೂ ಕೈಗೊಳ್ಳಬೇಕು’ ಎಂದು ಕರೆ ನೀಡಿದರು.

ನಿವೃತ್ತ ಮುಖ್ಯೋಪಾಧ್ಯಾಯ ನಿಜಲಿಂಗಪ್ಪ ತಗಾರೆ ಮಾತನಾಡಿ, ‘ಇತ್ತೀಚಿನ ದಿನಗಳಲ್ಲಿ ಸಿಗರೇಟ್ ಹಾಗೂ ಗುಟ್ಕಾ ಸೇವನೆಯ ಚಟ ಯುವಜನತೆ ಮಾತ್ರವಲ್ಲದೆ ಮಹಿಳೆಯರು ಸೇರಿದಂತೆ ಎಲ್ಲ ವಯೋಮಾನದವರಲ್ಲೂ ವ್ಯಾಪಿಸುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಇದು ಸಮಾಜದ ಆರೋಗ್ಯಕ್ಕೆ ಗಂಭೀರ ಸವಾಲಾಗಿ ಪರಿಣಮಿಸಿದೆ’ ಎಂದು ಕಳವಳ ವ್ಯಕ್ತಪಡಿಸಿದರು.

ಪ್ರಗತಿಪರ ರೈತ ಮಲ್ಲಿಕಾರ್ಜುನ ಪಾಟೀಲ ಸ್ವಾಗತಿಸಿದರು. ಹಿರಿಯ ನಾಗರಿಕ ಅಶೋಕ ಶೀಲವಂತ ವಂದಿಸಿದರು. ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಸಿಗರೇಟ್ ದಹಿಸಿ ತಂಬಾಕು ವಿರೋಧಿ ಸಂದೇಶ ಸಾರಲಾಯಿತು.

ಜ್ಞಾನೇಶ್ವರ್ ಪಾಟೀಲ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಈ ಸಂದರ್ಭದಲ್ಲಿ ಈಶ್ವರ ಕನೆರಿ, ವಸಂತ್ ದೊಡಮನಿ, ಗೋಪಾಲ ರೆಡ್ಡಿ, ವೈಜಿನಾಥ್ ನೌಬಾದ ಸೇರಿದಂತೆ ಅನೇಕ ಯೋಗ ಸಾಧಕರು, ಹಿರಿಯ ನಾಗರಿಕರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-33-1114793495

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.