ಶುಕ್ರವಾರ, ಜನವರಿ 22, 2021
22 °C

ಬೀದರ್ ಎಪಿಎಂಸಿ ಅಧ್ಯಕ್ಷ ಪನಾಳೆ ರಾಜೀನಾಮೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಬೀದರ್ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷ ಅನಿಲಕುಮಾರ ಪನಾಳೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಪಕ್ಷದ ವರಿಷ್ಠರ ಆದೇಶದಂತೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಶಿವಶರಣಪ್ಪ ಮಜಗೆ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದೇನೆ ಎಂದು ತಿಳಿಸಿದ್ದಾರೆ.

ಎರಡನೇ ಅವಧಿಯ 20 ತಿಂಗಳು ಹಾಗೂ ಮೂರನೇ ಅವಧಿಯ 6 ತಿಂಗಳು ಸೇರಿದಂತೆ 26 ತಿಂಗಳ ಕಾಲ ಅಧ್ಯಕ್ಷನಾಗಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇನೆ. ಗ್ರಾಮೀಣ ಭಾಗದ ರೈತರ ಅನುಕೂಲ ಕ್ಕಾಗಿ ತಾಲ್ಲೂಕಿನ ಮನ್ನಳ್ಳಿ, ಕಮಠಾಣ ಹಾಗೂ ಬೆನಕನಳ್ಳಿಯಲ್ಲಿ ತಲಾ ₹75 ಲಕ್ಷದ ಗ್ರಾಮೀಣ ಸಂತೆಗಳನ್ನು ನಿರ್ಮಿ ಸಲಾಗಿದೆ. ಜಮಿಸ್ತಾನಪುರ ಉಪ ಮಾರುಕಟ್ಟೆ ಪ್ರಾಂಗಣದಲ್ಲಿ ಮನೆ ನಿರ್ಮಾಣಕ್ಕೆ 140 ಹಮಾಲರಿಗೆ ಹಕ್ಕುಪತ್ರ ವಿತರಿಸಲಾಗಿದೆ ಎಂದು ಹೇಳಿದ್ದಾರೆ.

ನಗರದ ಮಾರುಕಟ್ಟೆ ಪ್ರಾಂಗಣದಲ್ಲಿ ಸಿಸಿ ರಸ್ತೆಗಳನ್ನು ನಿರ್ಮಿಸಲಾಗಿದೆ. ಎರಡು ಹೈಟೆಕ್ ಶೌಚಾಲಯಗಳನ್ನು ಕಟ್ಟಲಾಗಿದೆ. ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಈಗಾಗಲೇ ಟೆಂಡರ್ ಆಗಿದ್ದು, ಶೀಘ್ರ ಅಳವಡಿಕೆ ಆಗಲಿದೆ. ಜಮಿಸ್ತಾನಪುರ ಉಪ ಮಾರುಕಟ್ಟೆ ಪ್ರಾಂಗಣದಲ್ಲಿ ತರಕಾರಿ ಮಾರುಕಟ್ಟೆ ನಿರ್ಮಾಣಕ್ಕೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.

2019-20ನೇ ಸಾಲಿನಲ್ಲಿ ಬೀದರ್ ಮಾರುಕಟ್ಟೆ ಸಮಿತಿಯ ಇತಿಹಾಸದಲ್ಲೇ ಅತಿ ಹೆಚ್ಚು ಅಂದರೆ ₹7.25 ಕೋಟಿ ಮಾರುಕಟ್ಟೆ ಶುಲ್ಕ ಸಂಗ್ರಹಿಸಲಾಗಿದೆ. ಇದು, ಕಲ್ಯಾಣ ಕರ್ನಾಟಕದಲ್ಲಿ ಪ್ರಥಮ ಹಾಗೂ ರಾಜ್ಯದಲ್ಲಿ ಸಂಗ್ರಹಿಸಲಾದ ನಾಲ್ಕನೇ ಅತಿಹೆಚ್ಚು ಶುಲ್ಕವಾಗಿದೆ ಎಂದು ಹೇಳಿದ್ದಾರೆ.

ಸಮಿತಿಯ ಸದಸ್ಯರು ಹಾಗೂ ಸಿಬ್ಬಂದಿಯ ಸಹಕಾರದಿಂದಾಗಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಗಿದೆ. ಎರಡು ಅವಧಿಗೆ ತಮಗೆ ಅಧ್ಯಕ್ಷ ಸ್ಥಾನದ ಅವಕಾಶ ಕೊಟ್ಟಿದ್ದಕ್ಕಾಗಿ ಪಕ್ಷದ ವರಿಷ್ಠರು ಹಾಗೂ ಸದಸ್ಯರಿಗೆ ಕೃತಜ್ಞತೆ ಸಲ್ಲಿಸುವೆ ಎಂದು ತಿಳಿಸಿದ್ದಾರೆ.

ಎಪಿಎಂಸಿಯ ಮೂರನೇ ಅವಧಿಯ 20 ತಿಂಗಳ ಪೈಕಿ ಅಧ್ಯಕ್ಷ ಸ್ಥಾನಕ್ಕೆ ಅನಿಲಕುಮಾರ ಪನಾಳೆ ಹಾಗೂ ವಿಜಯಕುಮಾರ ಆನಂದೆ ಅವರ ನಡುವೆ ಒಪ್ಪಂದ ಆಗಿತ್ತು. ಕರಾರು ಅವಧಿ ಮುಗಿದ ಕಾರಣ ರಾಜೀನಾಮೆ ಕೊಟ್ಟಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು