ಔರಾದ್: ತಾಲ್ಲೂಕಿನ ವನಮಾರಪಳ್ಳಿಯಿಂದ ಬಾರ್ಡರ್ವರೆಗೆ ₹81.60 ಲಕ್ಷ ಮೊತ್ತದಲ್ಲಿ 2 ಕಿ.ಮೀ. ರಸ್ತೆ ನಿರ್ಮಾಣ ಸೇರಿದಂತೆ ಒಟ್ಟು ₹8 ಕೋಟಿ ಮೊತ್ತದ ವಿವಿಧ ಅಭಿವೃದ್ದಿ ಕಾಮಗಾರಿಗೆ ಗುರುವಾರ ಶಾಸಕ ಪ್ರಭು ಚವಾಣ್ ಚಾಲನೆ ನೀಡಿದರು.

₹5 ಕೋಟಿ ಮೊತ್ತದಲ್ಲಿ ನಾರಾಯಣಪೂರ ಕ್ರಾಸ್ನಿಂದ ಅಲ್ಲಾಪೂರ ರಸ್ತೆ, ₹1.5 ಲಕ್ಷ ಮೊತ್ತದ ಚಿಮ್ಮೆಗಾಂವ-ಹಂದಿಕೇರಾ ರಸ್ತೆ, ₹9 ಲಕ್ಷ ವೆಚ್ಚದ ಸಮುದಾಯ ಭವನ ನಿರ್ಮಾಣ, ಹಂದಿಕೇರಾದಲ್ಲಿ ₹58 ಲಕ್ಷ ಮೊತ್ತದ ಶಾಲಾ ತರಗತಿ ಕೊಠಡಿಗಳ ನಿರ್ಮಾಣ, ಭಂಡಾರಕುಮಟಾದಲ್ಲಿ ₹20 ಲಕ್ಷ ವೆಚ್ಚದ ಬ್ರಿಡ್ಜ್ ಕಂ ಬ್ಯಾರೇಜ್ ದುರಸ್ತಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು.

ಕಾಳಾಪಟ್ಟಿ ತಾಂಡಾದಿಂದ ಸಾವರಗಾಂವ ಎಂ.ಎಸ್.ಬಾರ್ಡರ್ವರೆಗೆ ₹65 ಲಕ್ಷ ವೆಚ್ಚದ ರಸ್ತೆ ಕಾಮಗಾರಿ, ಔರಾದ್ ಪಟ್ಟಣದಲ್ಲಿ ಉದ್ಯಾನವನ ಅಭಿವೃದ್ಧಿ, ಶಾಲೆಗಳಲ್ಲಿ ಶೌಚಾಲಯ ನಿರ್ಮಾಣ, ಬೋರವೆಲ್ ಅಳವಡಿಕೆ, ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗಳಿಗೂ ಚಾಲನೆ ನೀಡಿದರು.

ಪ್ರತಿಯೊಂದು ಕಾಮಗಾರಿಯೂ ಗುಣಮಟ್ಟದಿಂದ ನಡೆಯಬೇಕು. ಅಧಿಕಾರಿಗಳು ನಿರಂತರವಾಗಿ ಸ್ಥಳ ಪರಿಶೀಲನೆ ನಡೆಸಿ ಕಾಮಗಾರಿಗಳ ಗುಣಮಟ್ಟ ಖಚಿತಪಡಿಸಿಕೊಳ್ಳಬೇಕು ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ಮುಖಂಡ ಧೊಂಡಿಬಾ ನರೋಟೆ, ಶಿವಾಜಿರಾವ ಪಾಟೀಲ, ರಾಮ ನರೋಟೆ, ದಯಾನಂದ ಘೂಳೆ, ಕೇರಬಾ ಪವಾರ, ದೇವಿಪ್ರಸಾದ್ ಘಡ್ಕೆ, ಸಂತೋಷ ಪೋಕಲವಾರ, ಸಂಜು ವಡೆಯಾರ್, ಅಬ್ಜಲ್ ಪಠಾಣ, ಚೇತನ ಕಪ್ಪಿಕೇರೆ, ಶಿವಾಜಿ ಬೋಗಾರ, ಪ್ರಕಾಶ ಅಲ್ಮಾಜೆ, ಬಸವರಾಜ ಹಳ್ಳೆ, ಅಂಬಾದಾಸ ನೇಳಗೆ, ಆನಂದ ದ್ಯಾಡೆ, ಸಂದೀಪ ಪಾಟೀಲ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-33-200702795

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.