ಔರಾದ್: ತಾಲ್ಲೂಕಿನ ಕೌಠಾ (ಬಿ) ಗ್ರಾಮ ಪಂಚಾಯಿತಿಯಲ್ಲಿ ಬರುವ ಕೌಡಗಾಂವ್ ಹಾಗೂ ವಡಗಾಂವ್ (ಡಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಸೋರಳ್ಳಿ ಗ್ರಾಮದಲ್ಲಿ ಜನ ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆ.

ಕೌಡಗಾಂವ್ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ನಲ್ಲಿ ನೀರು ಬಾರದೆ ಜನ ಸುಡು ಬಿಸಿಲಲ್ಲಿ ತೋಟದ ಬಾವಿಗಳಿಗೆ ಅಲೆಯಬೇಕಾಗಿದೆ. ಬಲ್ಲೂರ್ ಬಳಿಯ ಕೊಳವೆ ಬಾವಿಯಿಂದ ಕೌಡಗಾಂವ್ಗೆ ನೀರು ಪೂರೈಸುವ ಪೈಪ್ಲೈನ್ ಒಡೆದು ಹೋಗಿದೆ. ಹೀಗಾಗಿ ನೀರು ಬರುತ್ತಿಲ್ಲ. ಈ ಕುರಿತು ಮೇಲಾಧಿಕಾರಿಗಳ ಗಮನಕ್ಕೆ ತಂದರೂ ಕುಡಿಯವ ನೀರಿನ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ ಎಂದು ಭೀಮ ಆರ್ಮಿ ತಾಲ್ಲೂಕು ಅಧ್ಯಕ್ಷ ಗೌತಮ ಮೇತ್ರೆ ತಿಳಿಸಿದ್ದಾರೆ.

ಸೋರಳ್ಳಿ ಗ್ರಾಮದಲ್ಲೂ ಜನ ನೀರಿಗಾಗಿ ಅಹೋರಾತ್ರಿ ಪರದಾಡಬೇಕಿದೆ. ಸರ್ಕಾರ ಹಣ ಖರ್ಚು ಮಾಡಿ ಎರಡು ತೆರೆದ ಬಾವಿ ಕೊರೆದಿದೆ. ಆದರೆ ಅಲ್ಲಿಯ ನೀರು ಜನರಿಗೆ ಕೊಡುತ್ತಿಲ್ಲ. ಕೊಳವೆ ಬಾವಿ ಇದ್ದರೂ ದುರಸ್ತಿ ಮಾಡುತ್ತಿಲ್ಲ ಎಂದು ಘಾಳೆಪ್ಪ ಸೋರಳ್ಳಿ ದೂರಿದ್ದಾರೆ.

ಸೋರಳ್ಳಿ ಗ್ರಾಮದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇದೆ. ಈ ಎಲ್ಲ ಜನರಿಗೆ ನೀರು ಸಿಗದೆ ತೊಂದರೆಯಲ್ಲಿದ್ದಾರೆ. ಆದರೇ ಅಧಿಕಾರಿಗಳು ಕಾಳಜಿ ತೋರುತ್ತಿಲ್ಲ’ ಎಂದು ಆರೋಪಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-33-1147915272

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.