ಮನ್ಮಥಪ್ಪ ಸ್ವಾಮಿ

ಔರಾದ್: ಬೇಸಿಗೆ ಬಿಸಿಲು ತೀವ್ರವಾಗುತ್ತಿದ್ದಂತೆ ತಾಲ್ಲೂಕಿನ ಗಡಿ ಭಾಗದಲ್ಲಿ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಎದುರಾಗಿದೆ.

ಈಗಾಗಲೇ ಸಾವರಗಾಂವ್ ಸೇರಿದಂತೆ ಕೆಲ ಗ್ರಾಮಗಳಲ್ಲಿ ಜನರಿಗೆ ಟ್ಯಾಂಕರ್ ನೀರು ಪೂರೈಸಲಾಗುತ್ತಿದೆ. ಇತ್ತ ಔರಾದ್ ಪಟ್ಟಣದಲ್ಲೂ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಕಾಡುತ್ತಿದೆ. ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ (ಎಪಿಎಂಸಿ) ಪ್ರಾಂಗಣದಲ್ಲಿ ವಾರಕೊಮ್ಮೆ (ಸೋಮವಾರ) ನಡೆಯುವ ಸಂತೆಗೂ ಬರದ ಬಿಸಿ ತಟ್ಟಿದೆ.

‘ಇದು ಅಂತರರಾಜ್ಯ ಜಾನುವಾರು ಮಾರುಕಟ್ಟೆ. ಇಲ್ಲಿ ಮಹಾರಾಷ್ಟ್ರ, ತೆಲಂಗಾಣ ಸೇರಿದಂತೆ ವಿವಿಧೆಡೆಯ ಸಾವಿರಾರು ಜಾನುವಾರುಗಳು ಬರುತ್ತವೆ. ಆದರೆ ಕೆಲ ತಿಂಗಳಿನಿಂದ ಮಾರುಕಟ್ಟೆಗೆ ನೀರು ಪೂರೈಕೆ ಸ್ಥಗಿತವಾಗಿ ಕುಡಿಯುವ ನೀರಿಗೆ ಸಮಸ್ಯೆಯಾಗಿದೆ. ಹೀಗಾಗಿ ವಾರಕೊಮ್ಮೆ 5 ಸಾವಿರ ಲೀಟರ್ ಸಾಮರ್ಥ್ಯದ 2-3 ಟ್ಯಾಂಕರ್ ನೀರು ಖರೀದಿಸುತ್ತಿದ್ದೇವೆ’ ಎನ್ನುತ್ತಾರೆ ಇಲ್ಲಿಯ ಕೃಷಿ ಮಾರುಕಟ್ಟೆ ಸಮಿತಿ ಅಧಿಕಾರಿಗಳು.

‘ಮೊದಲು ಮಾರುಕಟ್ಟೆಗೆ ಪಟ್ಟಣ ಪಂಚಾಯಿತಿಯಿಂದ ನೀರು ಪೂರೈಸಲಾಗುತ್ತಿತ್ತು. ಆದರೆ ಕಳೆದ ನಾಲ್ಕೈದು ತಿಂಗಳಿನಿಂದ ಪೂರೈಕೆ ಸ್ಥಗಿತವಾಗಿದೆ. ಬೇರೆ ವ್ಯವಸ್ಥೆ ಮಾಡಿಕೊಳ್ಳಲು ತಯಾರಿ ನಡೆಸುತ್ತಿದ್ದೇವೆ. ಬೇಸಿಗೆ ಇರುವುದರಿಂದ ರೈತರಿಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡುತ್ತೇವೆ’ ಎಂದು ಎಪಿಎಂಸಿ ಕಾರ್ಯದರ್ಶಿ ಸಂತೋಷ ಆನಂದ ಹೇಳುತ್ತಾರೆ.

‘ಬೇಸಿಗೆ ತಾಪಮಾನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನೀರಿನ ಕೊರತೆ ಜಾನುವಾರುಗಳಿಗೆ ಸಂಕಷ್ಟ ತಂದೊಡ್ಡುತ್ತಿದೆ. ಕೆಲ ಜಾನುವಾರುಗಳು ದಣಿವಿನಿಂದ ಬಳಲುತ್ತಿವೆ’ ಎಂದು ರೈತರು ತಿಳಿಸಿದರು.

‘ಇದರ ಜೊತೆಗೆ ಸಂತೆಗೆ ಬರುವ ರೈತರು ಮತ್ತು ವ್ಯಾಪಾರಿಗಳು ಕೂಡ ಕುಡಿಯುವ ನೀರಿನ ಕೊರತೆಯನ್ನು ಎದುರಿಸುತ್ತಿದ್ದಾರೆ. ಸಾರ್ವಜನಿಕ ಕುಡಿಯುವ ನೀರಿನ ವ್ಯವಸ್ಥೆಯಿಲ್ಲದೆ ದೂರದಿಂದ ಬಂದ ರೈತರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಇತ್ತ ಗಮನಹರಿಸಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆ ಆಗದಂತೆ ನೋಡಿಕೊಳ್ಳಬೇಕು’ ಎಂದು ಎಪಿಎಂಸಿ ಮಾಜಿ ಸದಸ್ಯ ಗೋವಿಂದ ಇಂಗಳೆ ಆಗ್ರಹಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-33-1068077503

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.