ಶನಿವಾರ, ಸೆಪ್ಟೆಂಬರ್ 26, 2020
23 °C

ಬೀದರ್‌, ಬಸವಕಲ್ಯಾಣದಲ್ಲಿ ನಾಳೆ ಮದ್ಯ ಮಾರಾಟ ನಿಷೇಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ನಿರ್ಮಾಣ ಭೂಮಿ ಪೂಜೆ ಕಾರ್ಯಕ್ರಮದ ಪ್ರಯುಕ್ತ ಬುಧವಾರ (ಆ.5) ಮಧ್ಯರಾತ್ರಿ 12 ಗಂಟೆವರೆಗೆ ಬೀದರ್ ನಗರ ಹಾಗೂ ಬಸವಕಲ್ಯಾಣ ನಗರ ವ್ಯಾಪ್ತಿಯಲ್ಲಿ ಎಲ್ಲ ವಿಧದ ಮದ್ಯದ ಮಾರಾಟ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಆದೇಶ ಹೊರಡಿಸಿದ್ದಾರೆ.

ಅಯೋಧ್ಯೆ ರಾಮಮಂದಿರ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ. ಹಿಂದೂಪರ ಸಂಘಟನೆಯವರು ಮಂದಿರ, ಇತರ ಸ್ಥಳ ಹಾಗೂ ಮನೆಗಳಲ್ಲಿ ಸಂಭ್ರಮ ಆಚರಿಸಲಿದ್ದಾರೆ ಎಂದು ತಿಳಿದು ಬಂದಿದೆ. ಈ ಪ್ರಯುಕ್ತ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಮದ್ಯದಂಗಡಿಗಳನ್ನು ಮುಚ್ಚಿಡಲು ಆದೇಶಿಸಿದ್ದಾರೆ.

ರಾತ್ರಿ 9 ರವರೆಗೆ ಮಾತ್ರ ಅವಕಾಶ: ಜಿಲ್ಲೆಯಲ್ಲಿ ಕಂಟೇನ್ಮೆಂಟ್ ಝೋನ್‍ಗಳನ್ನು ಹೊರತುಪಡಿಸಿ ಎಲ್ಲ ವಿಧದ ಮದ್ಯದ ಅಂಗಡಿಗಳ ಅವಧಿಯನ್ನು ಆಗಸ್ಟ್ 31 ರ ವರೆಗೆ ಬೆಳಿಗ್ಗೆ 9 ರಿಂದ ರಾತ್ರಿ 9 ರವರೆಗೆ ಮಾತ್ರ ನಿಗದಿಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು