ಬೀದರ್: ‘ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಕುರಿತು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಆಡಿರುವ ಮಾತುಗಳು ಖಂಡನಾರ್ಹವಾಗಿದ್ದು, ಯತ್ನಾಳ ಮಾತು ಇತಿಹಾಸ ಅರಿವಿಲ್ಲದ ಮಾತು’ ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಹೇಳಿದ್ದಾರೆ.

ಬಸವಣ್ಣನ ಜನ್ಮಭೂಮಿಯಲ್ಲಿ ಹುಟ್ಟಿರುವ ಯತ್ನಾಳ ಅವರು ಬಸವಣ್ಣನವರ ಕುರಿತು ಇಂಥ ಮಾತುಗಳು ಆಡಿರುವುದು ಅವರಿಗೆ ಶೋಭೆ ತರುವಂಥದ್ದಲ್ಲ. ಬಸವಣ್ಣನವರ ತತ್ವಗಳನ್ನು ಜಗತ್ತೆ ಅನುಸರಿಸುತ್ತಿರುವ ಸಂದರ್ಭದಲ್ಲಿ ಯತ್ನಾಳ ಅವರಿಗೆ ಬಸವಣ್ಣನವರ ಚರಿತ್ರೆ, ಸಿದ್ಧಾಂತಗಳು ಸರಿಯಾಗಿ ಗೊತ್ತಿಲ್ಲದಿರುವುದು ವಿಷಾದನೀಯ ಸಂಗತಿ ಎಂದು ಶನಿವಾರ ತಿಳಿಸಿದ್ದಾರೆ.

ಯತ್ನಾಳ ಅವರು ಬಸವ ಪ್ರಜ್ಞೆಯನ್ನು ಬೆಳೆಸಿಕೊಂಡು ಬಸವಣ್ಣನವರ ನಿಜವಾದ ಚರಿತ್ರೆಯ ಅಧ್ಯಯನ ಮಾಡಬೇಕು. ಬಸವಣ್ಣನವರ ಕುರಿತು ಇಲ್ಲಸಲ್ಲದ ಮಾತುಗಳನ್ನು ಆಡಿ ಜನರ ಭಾವನೆಗೆ ಧಕ್ಕೆ ಉಂಟು ಮಾಡಬಾರದು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಬಸವಣ್ಣನವರಂತೆ ಹೊಳ್ಯಾಗ ಜಿಗಿಬೇಕು, ಇಲ್ಲವಾದರೆ ಸಾಬ್ರು ಆಗಿ’ ಎಂದು ಯತ್ನಾಳ ಅವರು ನವೆಂಬರ್ 25ರಂದು ಬೀದರ್ನಲ್ಲಿ ಹಮ್ಮಿಕೊಂಡಿದ್ದ ವಕ್ಫ್ ವಿರೋಧಿ ಪ್ರತಿಭಟನಾ ಸಭೆಯಲ್ಲಿ ಹೇಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.