ಚಿಟಗುಪ್ಪ (ಹುಮನಾಬಾದ್): ತಾಲ್ಲೂಕಿನ ಬಸೀರಾಪುರ ಮತ್ತು ಗುಡಿ ತಾಂಡಾಕ್ಕೆ ಸೋಮವಾರ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಗಿರೀಶ್ ಬದೋಲೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈಚೆಗೆ ಎರಡು ಗ್ರಾಮಗಳಲ್ಲಿ ನೀರಿನ ಸಮಸ್ಯೆ ಉಲ್ಬಣಗೊಂಡಿರುವ ವಿಷಯ ತಿಳಿದು ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀರಿನ ಸಮಸ್ಯೆ ಆಲಿಸಿದರು. ಗ್ರಾಮಗಳಲ್ಲಿನ ಕೊಳವೆ ಬಾವಿಗಳ ಮೋಟಾರ್ ತಕ್ಷಣ ದುರಸ್ತಿ ಮಾಡಿಸಿ, ಇಲ್ಲದಿದ್ದರೆ ಖಾಸಗಿ ಟ್ಯಾಂಕರ್ಗಳ ಮೂಲಕ ನೀರು ಸರಬರಾಜು ಮಾಡುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ತಾಪಂ ಇಒ ಲಕ್ಷ್ಮೀ ಬಿರಾದಾರ, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಶೇಖರ್ ರಾಗಾ, ಗ್ರಾಪಂ ಮಾಜಿ ಅಧ್ಯಕ್ಷ ಶ್ರೀಕಾಂತ ಪಾಟೀಲ, ಪಿಡಿಒ ಪ್ರವೀಣಕುಮಾರ್ ಮಠಪತಿ ಸೇರಿದಂತೆ ಇತರರು ಇದ್ದರು.

ಅಧಿಕಾರಿಗಳ ಸಭೆ: ಚಿಟಗುಪ್ಪ ಪಟ್ಟಣದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ ಅವರ ನೇತೃತ್ವದಲ್ಲಿ ಪಿಡಿಒಗಳ ಸಭೆ ನಡೆಸಿದರು.

ನಂತರ ಮಾತನಾಡಿ, ‘ಸದ್ಯ ಬಿಸಿಲಿನ ಪ್ರಖರತೆ ಅಧಿಕವಾಗಿದ್ದು, ತೆರೆದ ಬಾವಿ ಮತ್ತು ಕೊಳವೆ ಬಾವಿಗಳಲ್ಲಿನ ನೀರಿನ ಮಟ್ಟ ಕಡಿಮೆ ಆಗುತ್ತಿದೆ. ಹೀಗಾಗಿ ಚಿಟಗುಪ್ಪ ತಾಲ್ಲೂಕಿನ ಒಟ್ಟು 14 ಗ್ರಾಮ ಪಂಚಾಯಿತಿಗಳಲ್ಲಿ ನೀರಿನ ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು’ ಎಂದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ನಿತ್ಯ ಪಂಚಾಯಿತಿಗೆ ಭೇಟಿ ನೀಡುವುದರ ಜೊತೆಗೆ ಗ್ರಾಮಗಳಲ್ಲಿನ ನೀರಿನ ಸಮಸ್ಯೆ ಆಲಿಸಬೇಕು. ನೀರಿನ ಸಮಸ್ಯೆ ಆಗುವ ಸಾಧ್ಯತೆ ಇದ್ದರೆ ತಕ್ಷಣ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರಿಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾದಲ್ಲಿ ನಿಮ್ಮನ್ನು ನೇರವಾಗಿ ಹೊಣೆ ಮಾಡಲಾಗುವುದು’ ಎಂದು ಎಚ್ಚರಿಸಿದರು.

ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ನರೇಗಾ ಯೋಜನೆ ಅಡಿಯಲ್ಲಿ ಕೊಲಿ ಕೆಲಸ ನೀಡಬೇಕು. ಕಾಮಗಾರಿ ನಡೆಯುವ ಸ್ಥಳದಲ್ಲಿ ನೀರಿನ ವ್ಯವಸ್ಥೆ ಕಲ್ಪಿಸಬೇಕು ಸೂಚನೆ ನೀಡಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀ ಬಿರಾದಾರ್ ಮಾತನಾಡಿ, ‘ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ವಾಗುತ್ತಿದೆ. ಹೀಗಾಗಿ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಬೇಕು’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-33-2082471128

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.