ಬೀದರ್: ಬೀದರ್–ಬೆಂಗಳೂರು, ಬೆಂಗಳೂರು–ಬೀದರ್ ನಡುವೆ ನಾಗರಿಕ ವಿಮಾನಯಾನ ಸೇವೆ ಆರಂಭಿಸಲು ಮೂಲಸೌಲಭ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಅನುಮೋದನೆ ನೀಡಿದೆ.

ಇತ್ತೀಚೆಗೆ ನಡೆದ ಸಚಿವ ಸಂಪುಟದಲ್ಲೂ ಇದಕ್ಕೆ ಒಪ್ಪಿಗೆ ನೀಡಲಾಗಿತ್ತು. ಇದರ ಬೆನ್ನಲ್ಲೇ ಇತರೆ ಕಾನೂನು ಪ್ರಕ್ರಿಯೆಗಳನ್ನು ಪೂರೈಸಿದ್ದು, ಮೇ 5ರಂದು ಇಲಾಖೆ ಅನುಮೋದನೆ ನೀಡಿದೆ. ಇದರ ಪ್ರತಿ ‘ಪ್ರಜಾವಾಣಿ’ಗೆ ಲಭ್ಯವಾಗಿದೆ.

ಒಂದು ವರ್ಷದ ಅವಧಿಗೆ ವಿಮಾನಯಾನ ಸೇವೆ ಪುನರ್ ಆರಂಭಿಸಲು ₹13.48 ಕೋಟಿಯನ್ನು ಸ್ಟಾರ್ ಏರ್ ಸಂಸ್ಥೆಗೆ ಪ್ರೋತ್ಸಾಹ ಧನ ಒದಗಿಸಲು ಸರ್ಕಾರ ಒಪ್ಪಿದೆ. ನಿರಂತರ ಕಾರ್ಯಾಚರಣೆ ಸಾಧ್ಯವಾಗದ ಕಾರಣ ಸ್ಥಿರ ಮತ್ತು ಖಚಿತ ಆರ್ಥಿಕ ಬೆಂಬಲದ ರೂಪದಲ್ಲಿ ಘೋಡಾವತ್ ಎಂಟರ್ಪ್ರೈಸೆಸ್ ಲಿಮಿಟೆಡ್ಗೆ (ಸ್ಟಾರ್ ಏರ್) ವಿಜಿಎಫ್ ರೂಪದಲ್ಲಿ ನಗದು ರಿಯಾಯಿತಿ ನೀಡಲಾಗುವುದು. ಸದರಿ ಅನುದಾನವನ್ನು 80:20ರ ಅನುಪಾತದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ (ಕೆಕೆಆರ್ಡಿಬಿ) ಹಾಗೂ ಮೂಲಸೌಲಭ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯಡಿ ಭರಿಸಲು ಅನುಮೋದಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ವಿಮಾನಯಾನ ಕಾರ್ಯಾಚರಣೆ ಕೈಗೊಳ್ಳಲು ಆರ್ಥಿಕ ಇಲಾಖೆಯು ಕೆಟಿಪಿಪಿ ಕಾಯ್ದೆ, 1999ರ ಕಲಂ 4(ಜಿ) ಅಡಿ ವಿನಾಯಿತಿ ಪಡೆದ ನಂತರ, ಕೆಎಸ್ಐಐಡಿಸಿ ನಿಗಮವು ಘೋಡಾವತ್ ಎಂಟರ್ಪ್ರೈಸೆಸ್ ಪ್ರೈವೇಟ್ ಲಿಮಿಟೆಡ್ (ಸ್ಟಾರ್ ಏರ್) ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಳ್ಳಲು ಅನುಮೋದಿಸಿದೆ ಎಂದು ತಿಳಿಸಲಾಗಿದೆ. ಇನ್ನಷ್ಟೇ ವಿಮಾನಯಾನ ಸಂಚಾರದ ದಿನಾಂಕ ಅಂತಿಮಗೊಳ್ಳಬೇಕಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-33-1503292951

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.