ಭಾಲ್ಕಿ: ತಾಲ್ಲೂಕಿನ ಭಾತಂಬ್ರಾ ಗ್ರಾಮದ ಸರ್ಕಾರಿ ಆಸ್ಪತ್ರೆ ಸಮೀಪದ ಮುಖ್ಯ ರಸ್ತೆಯಲ್ಲಿ ಬಸವ ಜಯಂತಿ ಹಿನ್ನೆಲೆಯಲ್ಲಿ ನಿರ್ಮಿಸಿದ್ದ ಬಸವೇಶ್ವರ ಕಟ್ಟೆಯನ್ನು ತಾಲ್ಲೂಕು ಆಡಳಿತ ತೆರವು ಗೊಳಿಸಿರುವುದನ್ನು ಖಂಡಿಸಿ ಬಸವ ಭಕ್ತರು ಶುಕ್ರವಾರ ತಡ ರಾತ್ರಿವರೆಗೆ ಪ್ರತಿಭಟನೆ ನಡೆಸಿದರು.

ನಂತರ ಪೊಲೀಸ್ ಅಧಿಕಾರಿಗಳು, ತಾಲ್ಲೂಕು ಆಡಳಿತ ಅಧಿಕಾರಿಗಳ ಮನವೊಲಿಕೆಯ ನಂತರ ಪ್ರತಿಭಟನೆಯನ್ನು ಹಿಂಪಡೆದಿದ್ದರು.

ಸ್ಥಳ ಅತಿಕ್ರಮಣ ಸಂಬಂಧ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ನೀಡಿರುವ ದೂರಿನ ಮೇರೆಗೆ ಒಟ್ಟು ನಾಲ್ಕು ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ. ಪರಿಸ್ಥಿತಿಯ ಮೇಲೆ ನಿಗಾ ಇಡಲು ಸದ್ಯ ಗ್ರಾಮದಲ್ಲಿ ಸ್ಥಳೀಯ ಪೊಲೀಸ್ ಸಿಬ್ಬಂದಿ, ಒಂದು ಡಿ.ಆರ್. ವ್ಯಾನ್ ಇದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-33-1858144564

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.