ಔರಾದ್: ವಿಧಾನ ಪರಿಷತ್ ಸದಸ್ಯ ಭೀಮರಾವ ಪಾಟೀಲ ಪಟ್ಟಣ ಪಂಚಾಯಿತಿಯಲ್ಲಿರುವ ತಮ್ಮ ಕಚೇರಿಯಲ್ಲಿ ಮಧ್ಯಾಹ್ನ ಸಾರ್ವಜನಿಕರ ಸಮಸ್ಯೆ ಆಲಿಸಿದರು.

ಸರ್ಕಾರ ಔರಾದ್ ಪಟ್ಟಣ ಪಂಚಾಯಿತಿ ಪುರಸಭೆಯಾಗಿ ಆದೇಶ ಮಾಡಿದರೂ ಅದು ಕಾರ್ಯರೂಪಕ್ಕೆ ಬಂದಿಲ್ಲ. ಸರ್ಕಾರದ ನಿಯಮ ಉಲ್ಲಂಘಿಸಿ ಪೌರ ಕಾರ್ಮಿಕರಿಗೆ ಗಣಕ ಯಂತ್ರ ಸಹಾಯಕರ ಹುದ್ದೆ ನೀಡಿದ್ದಾರೆ. ಕಾಯಂ ಸಿಬ್ಬಂದಿ ಕೊರತೆಯಿಂದ ಸಾರ್ವಜನಿಕರ ಕೆಲಸ ಕಾರ್ಯಗಳು ಆಗುತ್ತಿಲ್ಲ ಎಂದು ರತ್ನದೀಪ ಕಸ್ತೂರೆ, ಸುನೀಲ ಮಿತ್ರಾ ವಿಧಾನ ಪರಿಷತ್ ಸದಸ್ಯರ ಗಮನಕ್ಕೆ ತಂದರು. ಈ ಬಗ್ಗೆ ತಾವು ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದರು.

ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ವಿಧಾನಪರಿಷತ್ ಸದಸ್ಯರು ರೋಗಿಗಳ ಜತೆ ಮಾತನಾಡಿ ಆಸ್ಪತ್ರೆಯಲ್ಲಿ ಸಿಗುವ ಸೌಲಭ್ಯ ಕುರಿತು ವಿಚಾರಿಸಿದರು. ಆಸ್ಪತ್ರೆಗೆ ಬೇಕಾಗುವ ಮೂಲ ಸೌಲಭ್ಯಗಳ ಕುರಿತು ಸರ್ಕಾರದ ಜತೆ ಮಾತನಾಡಿ ಹೆಚ್ಚಿನ ಮೂಲ ಸೌಕರ್ಯ ಒದಗಿಸಲು ಸಂಬಂಧಪಟ್ಟ ಇಲಾಖೆ ಸಚಿವರಿಗೆ ಪತ್ರ ಬರೆಯುವುದಾಗಿ ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-33-49791418

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.