ಬೀದರ್: ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ(ಬ್ರಿಮ್ಸ್) ಸೇರಿದ ಜಾಗದ ಅತಿಕ್ರಮಣವನ್ನು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಸೋಮವಾರ ತೆರವುಗೊಳಿಸಿದರು.

ಕೆಲ ಅಪರಿಚಿತರು ಭಾನುವಾರ ರಾತ್ರಿ ಬ್ರಿಮ್ಸ್ ವಸತಿ ಗೃಹಗಳ ನಿರ್ಮಾಣಕ್ಕೆ ಮೀಸಲಿಟ್ಟ ಜಾಗವನ್ನು ಅತಿಕ್ರಮಿಸಿ ಮೂರು ಅಡಿ ಎತ್ತರದ ಗೋಡೆ ನಿರ್ಮಿಸಿದ್ದರು. ಟಿನ್ ಶೆಡ್ ಕೂಡ ಹಾಕಿದ್ದರು. ಬ್ರಿಮ್ಸ್ ನಿರ್ದೇಶಕ ಡಾ.ಶಿವಕುಮಾರ ಶೆಟಕಾರ್ ಅವರು ಈ ಸಂಬಂಧ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ ಬರೆದಿದ್ದರು. ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಸ್ಥಳಕ್ಕೆ ತೆರಳಿ, ಪರಿಶೀಲಿಸಿ ಖುದ್ದು ಜಾಗದಲ್ಲೇ ನಿಂತು ಅತಿಕ್ರಮಣ ತೆರವುಗೊಳಿಸಿದರು. ಉಪವಿಭಾಗಾಧಿಕಾರಿ ಮುಹಮ್ಮದ್ ಶಕೀಲ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.