ಬೀದರ್: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಬೀದರ್ ಜಿಲ್ಲೆಯಲ್ಲಿ ಆಯೋಜಿಸಲು ಉದ್ದೇಶಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅಂತರರಾಷ್ಟ್ರೀಯ ಮಟ್ಟದ ಸಮ್ಮೇಳನ ರದ್ದಾಗಿರುವ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಬಹುಜನ ಸಮಾಜ ಪಕ್ಷ (ಬಿಎಸ್ಪಿ) ಒತ್ತಾಯಿಸಿದೆ.

ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಪಕ್ಷದ ಮುಖಂಡರು, ‘ಸರ್ಕಾರ ವಿಶೇಷ ಅನುದಾನ ಬಿಡುಗಡೆ ಮಾಡಿ ಸಮ್ಮೇಳನ ಆಯೋಜನೆಗೆ ಆದೇಶ ನೀಡಿದ್ದರೂ, ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಸಮರ್ಪಕ ಮೇಲ್ವಿಚಾರಣೆಯ ಕೊರತೆಯಿಂದ ಕಾರ್ಯಕ್ರಮ ರದ್ದಾಗಿದೆ’ ಎಂದು ಆರೋಪಿಸಿದರು.

‘ಸಮ್ಮೇಳನ ರದ್ದಿಗೆ ಕೆಳಹಂತದ ಅಧಿಕಾರಿಗಳನ್ನು ಮಾತ್ರ ಹೊಣೆಗಾರರನ್ನಾಗಿ ಮಾಡುವುದು ಸರಿಯಲ್ಲ. ಇಲಾಖೆಯ ಮುಖ್ಯಸ್ಥರಾಗಿರುವ ಉಪನಿರ್ದೇಶಕರೇ ಸಂಪೂರ್ಣ ಜವಾಬ್ದಾರಿ ಹೊತ್ತುಕೊಳ್ಳಬೇಕು’ ಎಂದು ಬಿಎಸ್ಪಿ ಮುಖಂಡರು ಆಗ್ರಹಿಸಿದರು.

‘ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಆದೇಶ ಹೊರಡಿಸಬೇಕು. ಇಲ್ಲದಿದ್ದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಉಪವಾಸ ಸತ್ಯಾಗ್ರಹ ಹಾಗೂ ಧರಣಿ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಬಿಎಸ್ಪಿ ಜಿಲ್ಲಾಧ್ಯಕ್ಷ ಕಪಿಲ ಗೋಡಬೊಲೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಕ್ತಿಕಾಂತ ಭಾವಿದೊಡ್ಡಿ, ಜ್ಞಾನೇಶ್ವರ ಸಿಂಗಾರೆ, ಅಶೋಕ ಮಂಠಾಳ್ಕರ್, ರಾಜಕುಮಾರ ಮೂಲಭಾರತಿ, ಸುರೇಶ ಜೋಜನಾಕರ್, ಅಂಬಾದಾಸ ಚಕ್ರವರ್ತಿ, ಮಹೇಶ ಭೋಲಾ, ಜಾಫರ್ ಖುರೇಷಿ, ಮಲ್ಲಿಕಾರ್ಜುನ ಕೆ., ಭಾರತ ಭಾಗೆಕರ್, ಸಚಿನ್ ಗಿರಿ, ಶಂಕರ ಫುಲೆ, ನಿಲೇಶ ಮೇಲಕೇರಿ ಸೇರಿದಂತೆ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-33-1858159701

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.