ಬೀದರ್: ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ (ಬಿಎಸ್ಎಸ್ಕೆ) ಜಿಲ್ಲೆಯ ಜೀವನಾಡಿಯಾಗಿದ್ದು, ಮೂರು ವರ್ಷಗಳಿಂದ ಬಂದ್ ಆಗಿರುವ ಕಾರ್ಖಾನೆ ಪುನರಾರಂಭಕ್ಕೆ ಸರ್ಕಾರದ ಮೇಲೆ ಒತ್ತಡ ಹೇರಬೇಕೆಂದು ಸ್ಥಳೀಯ ರೈತ ಮುಖಂಡರು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಘಟಕದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರಿಗೆ ನಗರದಲ್ಲಿ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿದರು.

ನಗರದಲ್ಲಿ ಏರ್ಪಡಿಸಿದ್ದ ರೈತ ಸಮಾವೇಶದಲ್ಲಿ ಜಿಲ್ಲೆಯ ಜ್ವಲಂತ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಿದ ಸಂಘಟನೆಯ ಸ್ಥಳೀಯ ಪದಾಧಿಕಾರಿಗಳು, ಬೆಳೆ ವಿಮೆ ಹಣವನ್ನು ತಕ್ಷಣ ರೈತರ ಖಾತೆಗೆ ಜಮೆ ಮಾಡಿಸುವುದು, ಕಾಡುಪ್ರಾಣಿಗಳ ಹಾವಳಿಯಿಂದ ಬೆಳೆ ರಕ್ಷಿಸಲು ಸೋಲಾರ್ ಬೇಲಿ ವ್ಯವಸ್ಥೆ ಕಲ್ಪಿಸುವುದು ಹಾಗೂ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವಂತೆ ಸರ್ಕಾರದ ಗಮನ ಸೆಳೆಯಬೇಕು ಎಂದರು.

ಬೀದರ್ ಜಿಲ್ಲೆಯ ಕಬ್ಬಿನ ಕಾರ್ಖಾನೆಗಳಲ್ಲಿ ಇಳುವರಿ ಕಡಿಮೆ ತೋರಿಸಲಾಗುತ್ತಿದ್ದು ರೈತರಿಗೆ ಅನ್ಯಾಯವಾಗುತ್ತಿದೆ. ಇದನ್ನು ತಡೆಯಲು ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಸುಮಾರು 30 ಲಕ್ಷ ಮೆಟ್ರಿಕ್ ಟನ್ ಕಬ್ಬು ಬೆಳೆಯುತ್ತಿದ್ದರೂ ನಿರೀಕ್ಷಿತ ಇಳುವರಿ ಸಿಗದ ಕಾರಣ ಕಬ್ಬು ಸಂಶೋಧನಾ ಕೇಂದ್ರ ಸ್ಥಾಪನೆಗೆ ಶಿಫಾರಸು ಮಾಡಬೇಕು ಎಂದು ಮನವಿಯಲ್ಲಿ ಕೋರಿದರು.

ಬೀದರ್ ಜಿಲ್ಲೆ ಫಲವತ್ತಾದ ಭೂಮಿ ಹಾಗೂ ಕೃಷಿಗೆ ಪೂರಕವಾದ ವಾತಾವರಣ ಹೊಂದಿದೆ. ಸುಮಾರು 51 ವಿಧದ ಬೆಳೆಗಳನ್ನು ಬೆಳೆಯಲು ಸಾಧ್ಯತೆಗಳಿವೆ. ಜಿಲ್ಲೆಯ ಏಕೈಕ ಕಾರಂಜಾ ಜಲಾಶಯದಿಂದ ಪಟ್ಟಣಗಳಿಗೆ ಕುಡಿಯುವ ನೀರಿನ ಸೌಲಭ್ಯ ದೊರೆಯುತ್ತಿದೆಯಾದರೂ ರೈತರಿಗೆ ನೀರಾವರಿ ಸೌಲಭ್ಯ ಸಿಗುತ್ತಿಲ್ಲ. ಇದರಿಂದ ರೈತರು ಸ್ವಂತ ಖರ್ಚಿನಲ್ಲಿ ಕೊಳವೆ ಬಾವಿ ಹಾಗೂ ತೆರೆದ ಬಾವಿ ತೋಡಿಸಿ ಕೃಷಿ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಗೋಳು ತೋಡಿಕೊಂಡರು.

ಕಳೆದ ನಾಲ್ಕೈದು ವರ್ಷಗಳಿಂದ ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಸರಿಯಾದ ಬೆಳೆ ಬಂದಾಗಲೂ ಬೆಳೆಗಳಿಗೆ ಸೂಕ್ತ ಬೆಲೆ ಸಿಗದೇ ನಷ್ಟ ಅನುಭವಿಸುತ್ತಿದ್ದಾರೆ ಎಂದು ಮನವಿಯಲ್ಲಿ ಉಲ್ಲೇಖಿಸಲಾ ಗಿದೆ. ಜಿಲ್ಲೆಯಲ್ಲಿ ಕಬ್ಬು, ತೊಗರಿ, ಸೋಯಾಬಿನ್, ಉದ್ದು, ಹೆಸರು, ಕಡಲೆ, ಹತ್ತಿ ಸೇರಿದಂತೆ ವಿವಿಧ ವಾಣಿಜ್ಯ ಬೆಳೆಗಳನ್ನು ಬೆಳೆಯಲಾಗುತ್ತಿದ್ದು, ತೋಟಗಾರಿಕಾ ಕ್ಷೇತ್ರದಲ್ಲಿ ಮಾವು ಹಾಗೂ ಹಸಿ ಶುಂಠಿ ಪ್ರಮುಖ ಬೆಳೆಗಳಾಗಿವೆ ಎಂದು ತಿಳಿಸಿದರು.

ರೈತ ಸಂಘವು ಸರ್ಕಾರದ ಮುಂದೆ ಹಲವು ಬೇಡಿಕೆಗಳನ್ನು ಇಟ್ಟಿದ್ದು, ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಶಾಸನಬದ್ಧಗೊಳಿಸುವುದು, ವರ್ಷಪೂರ್ತಿ ಖರೀದಿ ಕೇಂದ್ರಗಳನ್ನು ತೆರೆಯುವುದು, ಕಬ್ಬು ಸರಬರಾಜು ಮಾಡಿದ ರೈತರಿಗೆ 15 ದಿನಗಳೊಳಗೆ ಬಿಲ್ ಪಾವತಿಸುವುದು ಸೇರಿದಂತೆ ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟರು. ಇದಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಸ್ಪಂದಿಸಿ, ಈ ಸಂಬಂಧ ಸರ್ಕಾರದ ಮಟ್ಟದಲ್ಲಿ ಗಮನ ಸೆಳೆದು, ನ್ಯಾಯ ಒದಗಿಸಿಕೊಡಲು ಪ್ರಯತ್ನಿಸುವೆ ಎಂದು ಆಶ್ವಾಸನೆ ನೀಡಿದರು.

ಸಂಘದ ಜಿಲ್ಲಾಧ್ಯಕ್ಷ ಸಿದ್ರಾಮಪ್ಪ ಆಣದೂರೆ, ಜಿಲ್ಲಾ ಉಪಾಧ್ಯಕ್ಷರಾದ ಶಂಕರಪ್ಪ ಪಾರಾ, ಸಿದ್ದಣ್ಣಾ ಭೂಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ ಸ್ವಾಮಿ ಸಿರ್ಸಿ, ಜಿಲ್ಲಾ ಕಾರ್ಯಾಧ್ಯಕ್ಷ ಶ್ರೀಮಂತ ಬಿರಾದಾರ, ರಾಜ್ಯ ಪ್ರತಿನಿಧಿ ಶೇಷರಾವ ಕಣಜಿ, ರಾಜ್ಯ ಉಪಾಧ್ಯಕ್ಷ ಚಂದ್ರಶೇಖರ ಜಮಖಂಡೆ, ಭಾಲ್ಕಿ ತಾಲ್ಲೂಕು ಅಧ್ಯಕ್ಷ ಬಾಬುರಾವ್ ಜೋಳದಾಪಕಾ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶೋಭಾವತಿ ಕಾರಬಾರಿ, ಬೀದರ್ ಅಧ್ಯಕ್ಷ ನಾಗಯ್ಯ ಸ್ವಾಮಿ, ಕಮಲನಗರ ಅಧ್ಯಕ್ಷ ಪ್ರವೀಣ ಕುಲಕರ್ಣಿ, ಬಸವಕಲ್ಯಾಣ ಅಧ್ಯಕ್ಷ ಸುಭಾಷ್ ರಗಟೆ, ಮಹಿಳಾ ಘಟಕ ಔರಾದ್ ಅಧ್ಯಕ್ಷೆ ಭಾಗ್ಯಶ್ರೀ ದೇಶಮುಖ, ಔರಾದ್ ಅಧ್ಯಕ್ಷ ಪ್ರಕಾಶ ಬಾವಗೆ, ಹುಮನಾಬಾದ್ ಅಧ್ಯಕ್ಷ ಸತೀಶ ನನ್ನೂರೆ ಹಾಗೂ ಮಹಿಳಾ ಘಟಕ ಭಾಲ್ಕಿ ಅಧ್ಯಕ್ಷೆ ಮಹಾನಂದ ದೇಶಮುಖ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-33-265407187

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.