ಬೀದರ್: ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ನಡೆದುಕೊಂಡು ಹೋಗುತ್ತಿದ್ದ ಆರೋಗ್ಯ ಇಲಾಖೆಯ ಸಿಬ್ಬಂದಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿದ್ದರಿಂದ ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬುದವಾರ ನಡೆದಿದೆ.

ನಗರದ ಗೌಳಿವಾಡ ಬಡಾವಣೆಯ ಭೀಮವ್ವಾ ಶಿವರಾಜ ಮಂಠಾಳೆ (56) ಮೃತ ಮಹಿಳೆ. ಮೃತರಿಗೆ ಒಬ್ಬ ಮಗ, ಮಗಳು ಇದ್ದಾರೆ.

‘ಔರಾದ್ ತಾಲ್ಲೂಕಿನ ಜಮಗಿ ಗ್ರಾಮದ ಆರೋಗ್ಯ ಉಪಕೇಂದ್ರದಲ್ಲಿ ಭೀಮವ್ವಾ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯಾಗಿ ಕೆಲಸ ನಿರ್ವಹಿಸುತ್ತಿದ್ದರು. ಎಂದಿನಂತೆ ಕೆಲಸಕ್ಕೆ ಹೋಗುತ್ತಿದ್ದಾಗ ಕೊಳಾರ ಕೈಗಾರಿಕಾ ಪ್ರದೇಶದ ಕಂಪನಿಯೊಂದರ ಬಸ್ ವೇಗವಾಗಿ ಬಂದು ಡಿಕ್ಕಿ ಹೊಡೆದಿದ್ದರಿಂದ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.