ಔರಾದ್: ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಕ್ರಮವಾಗಿ ಗೋ ಸಾಗಾಣಿಕೆ ಹಾಗೂ ಗೋವಧೆ ತಡೆಯಲು ಪೊಲೀಸ್ ಇಲಾಖೆ ಮತ್ತು ಪಶು ಸಂಗೋಪನೆ ಇಲಾಖೆ ವಿಶೇಷ ಕಾರ್ಯಾಚರಣೆ ನಡೆಸಬೇಕು ಎಂದು ಶಾಸಕ ಪ್ರಭು ಚವಾಣ್ ಒತ್ತಾಯಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಗೋವುಗಳ ಸಂರಕ್ಷಣೆಗಾಗಿ ಹಿಂದೆ ನಮ್ಮ ಸರ್ಕಾರ ರಾಜ್ಯದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ- ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಿದೆ. ಆದರೂ ರಾಜ್ಯದಲ್ಲಿ ರಾಜಾರೋಷವಾಗಿ ಅಕ್ರಮವಾಗಿ ಗೋ ಸಾಗಾಣಿಕೆ ಮತ್ತು ಗೋವಧೆ ಎಗ್ಗಿಲ್ಲದೆ ನಡೆಯುತ್ತಿರುವುದು ಖಂಡನೀಯ. ಬೀದರ್ ಜಿಲ್ಲೆಯ ವಿವಿಧ ಭಾಗಗಳಿಂದ ಗೋವುಗಳನ್ನು ಅಕ್ರಮವಾಗಿ ಹೈದ್ರಾಬಾದ್, ಮುಂಬೈ ಹಾಗೂ ಪುಣೆ ನಗರಗಳಿಗೆ ಸಾಗಿಸಲಾಗುತ್ತಿದೆ. ಈ ಅಕ್ರಮ ಚಟುವಟಿಕೆಗಳು ತಡೆದು ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-33-1140011984

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.