ಕಮಲನಗರ: ಇತ್ತಿಚೆಗೆ ಸಂಶಯಾಸ್ಪದವಾಗಿ ಸಾವನ್ನಪ್ಪಿದ ಬಾಲಕಿಯ ಮನೆಗೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಗುರುವಾರ ಭೇಟಿ ನೀಡಿ ಕುಟುಂಬದ ಸದಸ್ಯರ ಜತೆ ಚರ್ಚಿಸಿದರು.

ಬಾಲಕಿಯ ಕುಟುಂಬಸ್ಥರ ಸಮಸ್ಯೆಗಳನ್ನು ಆಲಿಸಿ, ತಹಶೀಲ್ದಾರ್ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳಿಂದ ಪ್ರಕರಣದ ಬಗ್ಗೆ ವಿವರಣೆ ಪಡೆದರು.

ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಜತೆ ದೂರವಾಣಿಯಲ್ಲಿ ಮಾತನಾಡಿದ ಅವರು, ‘ಮೃತ ಬಾಲಕಿಯ ಕುಟುಂಬ ಅತ್ಯಂತ ಬಡ ಕುಟುಂಬವಿದೆ. ಘಟನೆ ನಡೆದ ತಕ್ಷಣ ಪರಿಹಾರ ಕಲ್ಪಿಸಬೇಕಿತ್ತು. ಸುಮಾರು 20 ದಿನಗಳು ಕಳೆದಿವೆ. ಕೂಡಲೇ ಅಗತ್ಯ ಪರಿಹಾರ ಕಲ್ಪಿಸಲು ಕ್ರಮ ವಹಿಸಿ’ ಎಂದು ನಿರ್ದೇಶನ ನೀಡಿದರು.

ಬಳಿಕ ಮಾತನಾಡಿದ ಅವರು, ‘ಪ್ರಕರಣದ ಸಂಪೂರ್ಣ ಮಾಹಿತಿ ಪಡೆದಿದ್ದೇನೆ. ತಪ್ಪಿತಸ್ಥರ ವಿರುದ್ಧ ಕ್ರಮವಾಗಲೇಬೇಕು. ಕುಟುಂಬಸ್ಥರು ಬಡವರಿದ್ದಾರೆ. ಅವರಿಗೆ ನ್ಯಾಯ ಸಿಗಬೇಕು. ಸಮಾಜ ಕಲ್ಯಾಣ ಇಲಾಖೆಯಿಂದ ಕ್ರಮ ಜರುಗಿಸಬೇಕಿತ್ತು. ಅದಾಗಿಲ್ಲ. ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಜಿಲ್ಲಾಧಿಕಾರಿ ಗಳೊಂದಿಗೂ ಮಾತನಾಡುತ್ತೇನೆ. ಅವರಿಗೆ ನ್ಯಾಯ ಒದಗಿಸುತ್ತೇವೆ’ ಎಂದು ಹೇಳಿದರು.

ಶಾಸಕ ಪ್ರಭು ಬಿ.ಚವ್ಹಾಣ ಮಾತನಾಡಿ, ‘ಮೃತ ವಿದ್ಯಾರ್ಥಿನಿ ಅತ್ಯಂತ ಪ್ರತಿಭಾವಂತೆಯಾಗಿದ್ದು, ಕುಸ್ತಿ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದಳು. ರಾಜ್ಯ ಮಟ್ಟದಲ್ಲಿಯೂ ಸ್ಪರ್ಧಿಸಿದ್ದಳು. ಅವಳಿಗೆ ಸದಾ ಪ್ರೋತ್ಸಾಹ ನೀಡುತ್ತಿದ್ದೆ. ಇಂತಹ ದುರ್ಘಟನೆಗಳು ಮರುಕಳಿಸಬಾರದು. ಈ ಕುರಿತು ಅಧಿಕಾರಿಗಳೊಂದಿಗೆ ಮಾತನಾಡಿ ಕುಟುಂಬಕ್ಕೆ ಅಗತ್ಯ ಪರಿಹಾರ ಹಾಗೂ ನ್ಯಾಯ ದೊರಕಿಸುವಂತೆ ಸೂಚಿಸಿದ್ದೇನೆ. ದುಃಖದ ಈ ಸಂದರ್ಭದಲ್ಲಿ ನಾನು ಸದಾ ನಿಮ್ಮೊಂದಿಗೆ ಇದ್ದೇನೆ. ಕುಟುಂಬಸ್ಥರು ಧೈರ್ಯ ಕಳೆದುಕೊಳ್ಳಬಾರದು’ ಎಂದು ಹೇಳಿದರು.

ಈ ಸಂದರ್ಭದಲ್ಲಿ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಶೈಲೇಂದ್ರ ಬೆಲ್ದಾಳೆ, ಭಾಲ್ಕಿ ಮಾಜಿ ಶಾಸಕ ಪ್ರಕಾಶ ಖಂಡ್ರೆ, ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಉಲ್ಲಾಸಿನಿ ಮುಧಾಳೆ, ತಹಶೀಲ್ದಾರ ಅಮಿತಕುಮಾರ ಕುಲಕರ್ಣಿ, ಡಿವಾಯ್ಎಸ್ಪಿ ಸತೀಶ, ಮೃತ ಬಾಲಕಿ ತಾಯಿ ರೇಖಾ ರಾನಡೆ, ಬಿಜೆಪಿ ತಾಲ್ಲೂಕಾಧ್ಯಕ್ಷ ರಾಮಶೆಟ್ಟಿ ಪನ್ನಾಳೆ, ಕಿರಣ ಪಾಟೀಲ ಹಕ್ಯಾಳ, ಅರಹಂತ ಸಾವಳೆ, ರತ್ನದೀಪ ಕಸ್ತೂರೆ ಮತ್ತು ಗ್ರಾಮಸ್ಥರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-33-1862630702

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.