ಚಿಟ್ಟಾ(ಜನವಾಡ): ಬೀದರ್ ತಾಲ್ಲೂಕಿನ ಬೀದರ್- ಕಮಠಾಣ ಮುಖ್ಯರಸ್ತೆಯಲ್ಲಿನ ಚಿಟ್ಟಾ ಅರಣ್ಯ ಪ್ರದೇಶದಲ್ಲಿ ಬುಧವಾರ ಹೊತ್ತಿಕೊಂಡ ಆಕಸ್ಮಿಕ ಬೆಂಕಿಯಿಂದಾಗಿ ಹುಲ್ಲು, ಕಡ್ಡಿಗಳು ಸುಟ್ಟು ಕರಕಲಾಗಿವೆ.

ಅಗ್ನಿಶಾಮಕ ದಳ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ನಾಲ್ಕು ತಾಸು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು.

ಕಾಡಿಗೆ ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ ಬೀದರ್ನಿಂದ ಕಮಠಾಣಕ್ಕೆ ಹೊರಟಿದ್ದ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ತಕ್ಷಣ ತಮ್ಮ ಕಾರು ನಿಲ್ಲಿಸಿ, ಬೆಂಕಿ ಆರಿಸಲು ಅಗ್ನಿಶಾಮಕ ದಳ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಜತೆ ಕೈಜೋಡಿಸಿದರು. ಸ್ಥಳೀಯರು ಕೂಡ ಈ ಕಾರ್ಯಕ್ಕೆ ಸಾಥ್ ನೀಡಿದರು.

‘ರಸ್ತೆ ಬದಿಯಲ್ಲೇ ಬೆಂಕಿ ಹೊತ್ತಿಕೊಂಡಿತು. ಯಾರೋ ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ’ ಎಂದು ಬೀದರ್ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಚಂದ್ರಶೇಖರ ಹೇಮಾ ತಿಳಿಸಿದ್ದಾರೆ.

‘10 ರಿಂದ 12 ಎಕರೆ ಪ್ರದೇಶದಲ್ಲಿ ವ್ಯಾಪಿಸಿದ್ದ ಬೆಂಕಿಯನ್ನು ನಾಲ್ಕು ತಾಸು ಕಾರ್ಯಾಚರಣೆ ನಡೆಸಿ ನಿಯಂತ್ರಿಸಲಾಗಿದೆ. ಅವಘಡದಲ್ಲಿ ಯಾವುದೇ ಬೆಲೆ ಬಾಳುವ ಮರಗಳಿಗೆ ಹಾನಿಯಾಗಿಲ್ಲ’ ಎಂದು ಹೇಳಿದ್ದಾರೆ.

ಬೀದರ್ ನಗರದ ಹೊರವಲಯದ ನೌಬಾದ್ ಸಮಿಪದ ಅರಣ್ಯ ಪ್ರದೇಶದಲ್ಲಿ ಬುಧವಾರ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಅಗ್ನಿ ಅನಾಹುತ ತಡೆಗೆ ಸೂಚನೆ: ಅರಣ್ಯ ನಮ್ಮ ಅಮೂಲ್ಯ ಸಂಪತ್ತು. ಕಾಡ್ಗಿಚ್ಚುಗಳಿಂದ ಜೀವ ವೈವಿಧ್ಯ ಹಾಗೂ ಪರಿಸರಕ್ಕೆ ಉಂಟಾಗುವ ಹಾನಿ ತಡೆಯುವುದು ನಮ್ಮೆಲ್ಲರ ಜವಾಬ್ದಾರಿ. ಚಿಟ್ಟಾ ಅರಣ್ಯ ಪ್ರದೇಶದಲ್ಲಿ ಹೊತ್ತಿಕೊಂಡ ಬೆಂಕಿ ಹಿನ್ನೆಲೆಯಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ತ್ವರಿತ ಕ್ರಮಕ್ಕೆ ಸೂಚಿಸಿದ್ದೇನೆ. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳನ್ನು ತಡೆಯಲು ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಿದ್ದೇನೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-33-988225656

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.