ಬೀದರ್: ಬೀದರ್ನಿಂದ ನಾಗರಿಕ ವಿಮಾನಯಾನ ಸೇವೆಯನ್ನು ಯಾವುದೇ ರೀತಿಯ ತೊಡಕಿಲ್ಲದಂತೆ ಮುಂದುವರಿಸಬೇಕು. ಹೊಸ ಮಾರ್ಗಗಳನ್ನು ಸೇರಿಸಲು ಸಂಬಂಧಿಸಿದ ವಿಮಾನಯಾನ ಸಂಸ್ಥೆಗಳಿಗೆ ನಿರ್ದೇಶನ ನೀಡಬೇಕು ಎಂದು ಬೀದರ್ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಆಗ್ರಹಿಸಿದೆ.

ಈ ಸಂಬಂಧ ಸಂಸ್ಥೆಯ ಅಧ್ಯಕ್ಷ ಬಿ.ಜಿ.ಶೆಟಕಾರ್, ಕಾರ್ಯದರ್ಶಿ ವೀರೇಂದ್ರ ಶಾಸ್ತ್ರಿ ಅವರು ನಾಗರಿಕ ವಿಮಾನಯಾನ ಸಚಿವ ಕೆ.ರಾಮಮೋಹನ್ ನಾಯ್ಡು ಅವರಿಗೆ ಪತ್ರ ಬರೆದಿದ್ದಾರೆ.

ಬೀದರ್–ಬೆಂಗಳೂರು ನಡುವೆ ಸಂಚರಿಸುತ್ತಿದ್ದ ವಿಮಾನದಲ್ಲಿ ಮಾಸಿಕ 15 ಸಾವಿರಕ್ಕೂ ಅಧಿಕ ಜನ ಪ್ರಯಾಣ ಮಾಡಿದ್ದಾರೆ. 2024ಕ್ಕೆ ಹೋಲಿಸಿದರೆ 2025ನೇ ಸಾಲಿನಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ 60ರಷ್ಟು ಹೆಚ್ಚಾಗಿದೆ. ಒಪ್ಪಂದದ ಅವಧಿ ಮುಗಿದ ಹಿನ್ನೆಲೆಯಲ್ಲಿ ವಿಮಾನ ಸಂಚಾರ ನಿಂತು ಹೋಗಿದೆ. ಈ ವಿಷಯ ಗೊತ್ತಿದ್ದರೂ ಜಿಲ್ಲಾಡಳಿತ ತಯಾರಿ ಮಾಡಿಕೊಂಡಿರಲಿಲ್ಲ. ಪದೇ ಪದೇ ವಿಮಾನ ಸೇವೆ ಸ್ಥಗಿತಗೊಳ್ಳುತ್ತಿರುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಮನ್ವಯ ಸಾಧಿಸಿ, ಅಗತ್ಯ ಅನುದಾನ ಬಿಡುಗಡೆಗೊಳಿಸಿ, ವಿಮಾನ ಸಂಚಾರ ಆರಂಭಿಸಬೇಕು. ಬೆಂಗಳೂರಿನೊಂದಿಗೆ ಚೆನ್ನೈ, ನವದೆಹಲಿ, ಮುಂಬೈ ಸೇರಿದಂತೆ ಇತರೆ ನಗರಗಳಿಗೂ ವಿಮಾನ ಸೇವೆ ವಿಸ್ತರಿಸಬೇಕು. ನಾಗರಿಕರು, ಉದ್ಯಮಿಗಳು ಹಾಗೂ ಪ್ರವಾಸಿಗರಿಗೆ ಅನುಕೂಲವಾಗುತ್ತದೆ ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-33-1166872105

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.