ಸೋಮವಾರ, ಜುಲೈ 26, 2021
21 °C
ಚಿಟಗುಪ್ಪ: ನಾಗರಿಕ ಸಮಿತಿ ಪದಾಧಿಕಾರಿಗಳಿಂದ ಪ್ರತಿಭಟನೆ

ಬೀದರ್: ನಿಯಮ ಸಡಿಲಿಸಲು ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಟಗುಪ್ಪ: ಪಟ್ಟಣದಲ್ಲಿ ಕೊವೀಡ್–19 ನಿರ್ಬಂಧ ಸಡಿಲಿಸಬೇಕು ಎಂದು ಆಗ್ರಹಿಸಿ ನಾಗರಿಕ ಸಮಿತಿ ಪದಾಧಿಕಾರಿಗಳು ಪಟ್ಟಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿ, ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

‘ಕಳೆದ ಎರಡು ತಿಂಗಳುಗಳಿಂದ ತಾಲ್ಲೂಕು ಆಡಳಿತ ಬೆಳಿಗ್ಗೆ 7 ಗಂಟೆಯಿಂದ 11 ಗಂಟೆಯ ವರೆಗೆ ನಾಗರಿಕರಿಗೆ ದಿನಸಿ, ಹಾಲು ಖರೀದಿಸಲು ಅವಕಾಶ ನೀಡಿದೆ. ಜನದಟ್ಟಣೆ ಹೆಚ್ಚಾಗಿ ಅಂತರ ಕಾಯ್ದುಕೊಳ್ಳಲು ಸಾಧ್ಯವಾಗುತ್ತಿಲ್ಲ. ನಾಗರಿಕರು ಮಾಸ್ಕ್ ಧರಿಸುತ್ತಿಲ್ಲ. ಹೀಗಾಗಿ ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ. ಉದ್ಯೋಗಿಗಳು, ಅಂಗಡಿ ಮಾಲೀಕರು ಸಂಕಷ್ಟದಲ್ಲಿದ್ದಾರೆ. ಸದ್ಯಕ್ಕೆ ಕೇಂದ್ರ ಸರ್ಕಾರ ದೇಶದ ಎಲ್ಲೆಡೆ ನಿರ್ಬಂಧ ಸಡಿಲಿಸಿದೆ. ಪಟ್ಟಣದಲ್ಲೂ ಸಂಜೆಯವರೆಗೂ ವ್ಯಾಪಾರ ನಡೆಸಲು ಅವ ಕಾಶ ಕೊಡಬೇಕು ಎಂದು ಪುರಸಭೆ ಸದಸ್ಯ ದಿಲೀಪಕುಮಾರ ಬಗ್ದಲಕರ್, ಮಾಜಿ ಸದಸ್ಯ ಮಲ್ಲಿಕಾರ್ಜುನ ಪಾಟೀಲ ಅವರು ಆಗ್ರಹಿಸಿದರು.

ತಹಶೀಲ್ದಾರ್ ಜಿಯಾವುಲ್ಲ ಮನವಿ ಪತ್ರ ಸ್ವಿಕರಿಸಿ ಮಾತನಾಡಿ,‘ಮೇಲಾಧಿಕಾರಿಗಳ ಗಮನಕ್ಕೆ ತಂದು ವಸ್ತುಸ್ಥಿತಿ ಕುರಿತು ಚರ್ಚೆ ನಡೆಸಲಾಗುವುದು. ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದರು.

ಪಟ್ಟಣದ ಗಾಂಧಿ ಚೌಕ್‌ನಿಂದ ತಹಶೀಲ್ದಾರ್‌ ಕಚೇರಿ ವರೆಗೂ ಮೆರವಣಿಗೆ ನಡೆಸಲಾಯಿತು. ಮುಜಾಫರ್ ಪಟೇಲ್, ಸುಭಾಷ ಕುಂಬಾರ, ಬಾಬಾ,ನಸೀರ್‍ಖಾನ್, ಶಾಮ್, ರೇವಣಪ್ಪ ಹಾಗೂ ಸಚಿನ್ ಮಠಪತಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು