ಬೀದರ್: ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರಲಿರುವ ನೂತನ ಸರ್ಕಾರದಲ್ಲಿ ಭಾಲ್ಕಿ ಶಾಸಕರೂ ಆದ ಮಾಜಿಸಚಿವ ಈಶ್ವರ ಬಿ. ಖಂಡ್ರೆ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಜಿಲ್ಲೆ ಕಾಂಗ್ರೆಸ್ ಆಗ್ರಹಿಸಿದೆ.

ಈಶ್ವರ ಬಿ.ಖಂಡ್ರೆ ಅವರು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಲ್ಲಿ ಒಬ್ಬರು. ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕ ಹಾಗೂ ರಾಜ್ಯದಲ್ಲಿ ಪಕ್ಷದ ಬಲವರ್ಧನೆಗೆ ದುಡಿದಿದ್ದಾರೆ. ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬರುವಲ್ಲಿ ಅವರ ಶ್ರಮವೂ ಅಪಾರವಾಗಿದೆ ಎಂದು ಪಕ್ಷದ ಮುಖಂಡರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಖಂಡ್ರೆ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿದರೆ ಕಲ್ಯಾಣ ಕರ್ನಾಟಕ ಹಾಗೂ ರಾಜ್ಯ ಇನ್ನಷ್ಟು ಅಭಿವೃದ್ಧಿ ಕಾಣಲಿದೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಎಂ.ಎಂ. ಸಮಿ, ಜಾರ್ಜ್ ಫರ್ನಾಂಡಿಸ್, ಕಾರ್ಯದರ್ಶಿಗಳಾದ ಸುನೀಲ್ ಬಚ್ಚನ್, ರವೀಂದ್ರ, ಕೆಪಿಸಿಸಿ ಸದಸ್ಯ ಬಾಬುರಾವ್ ತುಂಬಾ, ಬೀದರ್ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಚನಶೆಟ್ಟಿ, ಭಾಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಣಮಂತರಾವ್ ಚವಾಣ್, ನಿಸಾರ್ ಅಹಮ್ಮದ್, ಬಸವಕಲ್ಯಾಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನೀಲಕಂಠ ರಾಠೋಡ್, ಔರಾದ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಕುಮಾರ ಹಲಬರ್ಗೆ, ಆನಂದ ಚವಾಣ್, ಬಿಡಿಎ ಸದಸ್ಯರಾದ ಭಗವಾನರಾವ್ ಪಾಂಡ್ರೆ ಸೇರಿದಂತೆ ಹಲವರು ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-33-501960705

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.