ಬೀದರ್: ಜಿಲ್ಲಾ ಕಾಂಗ್ರೆಸ್ ಅಸಮಾಧಾನಿತ ಮುಖಂಡರು ಬೆಂಗಳೂರಿನಲ್ಲಿ ಮಂಗಳವಾರ ಕೆಪಿಸಿಸಿ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಕಾಂಗ್ರೆಸ್ ಮುಖಂಡರೂ ಆದ ಮಾಜಿ ಸಚಿವ ರಾಜಶೇಖರ ಪಾಟೀಲ ಹುಮನಾಬಾದ್ ಅವರ ನೇತೃತ್ವದಲ್ಲಿ ಮುಖಂಡರು, ಶಿವಕುಮಾರ್ ಅವರನ್ನು ಭೇಟಿಯಾಗಿ, ಬೀದರ್ ಜಿಲ್ಲಾ ಕಾಂಗ್ರೆಸ್ನಲ್ಲಿ ತಲೆದೋರಿರುವ ಸಮಸ್ಯೆ ಸಂಬಂಧ ಚರ್ಚಿಸಲು ಸಭೆ ಕರೆಯಬೇಕೆಂದು ಮನವಿ ಮಾಡಿದರು. ಇದಕ್ಕೆ ಶಿವಕುಮಾರ್ ಸ್ಪಂದಿಸಿದ್ದಾರೆ ಎಂದು ತಿಳಿದು ಬಂದಿದೆ.

‘ಬೀದರ್ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಉಸ್ತುವಾರಿ ಸಚಿವರ ಕಾರ್ಯವೈಖರಿ ಕುರಿತು ಈಗಾಗಲೇ ಎರಡು ಸುತ್ತಿನ ಸಭೆ ಸೇರಿ ಚರ್ಚಿಸಲಾಗಿದೆ. ಜಿಲ್ಲೆಯ ಹಲವು ಮುಖಂಡರು ಅದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನು ಸರಿಪಡಿಸಬೇಕು ಎನ್ನುವುದು ಎಲ್ಲರ ಆಗ್ರಹವಾಗಿದೆ. ಈ ಕುರಿತು ಚರ್ಚಿಸಲು ಕೆಪಿಸಿಸಿ ಅಧ್ಯಕ್ಷರಿಗೆ ಸಮಯ ಕೇಳಲಾಗಿದ್ದು, ಇಷ್ಟರಲ್ಲೇ ಸಭೆ ಕರೆದು, ಸಮಸ್ಯೆ ಆಲಿಸಿ ಬಗೆಹರಿಸುವ ಆಶ್ವಾಸನೆ ನೀಡಿದ್ದಾರೆ’ ಎಂದು ಹೆಸರು ಬಹಿರಂಗ ಪಡಿಸಲು ಇಚ್ಛಿಸದ ಹಿರಿಯ ಕಾಂಗ್ರೆಸ್ ಮುಖಂಡರೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ಕೆಪಿಸಿಸಿ ಸಹಕಾರ ವಿಭಾಗದ ಅಧ್ಯಕ್ಷ ಧನರಾಜ ತಾಳಂಪಳ್ಳಿ, ಮುಖಂಡರಾದ ಅರವಿಂದಕುಮಾರ ಅರಳಿ, ಪಂಡಿತರಾವ್ ಚಿದ್ರಿ, ದತ್ತಾತ್ರೇಯ ಮೂಲಗೆ, ಅಬ್ದುಲ್ ಮನ್ನಾನ್ ಸೇಠ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.