ಬೀದರ್: ಕೇಂದ್ರ ಸರ್ಕಾರ ನಾರಿ ಶಕ್ತಿ ವಂದನಾ ಅಧಿನಿಯಮ–2023 ತಕ್ಷಣ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಮಹಿಳಾ ಘಟಕದಿಂದ ನಗರದ ಅಂಬೇಡ್ಕರ್ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ಪಕ್ಷದ ರಾಜ್ಯ ಮಹಿಳಾ ಘಟಕದ ಉಪಾಧ್ಯಕ್ಷೆ ರಾಜಶ್ರೀ ಶ್ರೀಕಾಂತ ಸ್ವಾಮಿ ಮಾತನಾಡಿ, ‘ನಾರಿ ಶಕ್ತಿ ವಂದನಾ ಅಧಿನಿಯಮ ಕುರಿತು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ನಾಯಕರು ಉದ್ದೇಶಪೂರ್ವಕವಾಗಿ ಗೊಂದಲ ಸೃಷ್ಟಿಸುತ್ತಿದ್ದಾರೆ’ ಎಂದು ಆರೋಪಿಸಿದರು.

‘ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಮಹಿಳಾ ಮೀಸಲಾತಿಗಾಗಿ ಮಹಿಳೆಯರು ಹೋರಾಟ ನಡೆಸುತ್ತಲೇ ಬಂದಿದ್ದಾರೆ. ಆದರೆ, ಈವರೆಗೆ ಅದು ಸಾಕಾರವಾಗಿಲ್ಲ’ ಎಂದು ಹೇಳಿದರು.

‘ಲೋಕಸಭೆ ಸ್ಥಾನಗಳನ್ನು 543 ರಿಂದ 850ಕ್ಕೆ ಹೆಚ್ಚಿಸಿ, ಹೆಚ್ಚುವರಿ ಕ್ಷೇತ್ರಗಳನ್ನು ಮಹಿಳೆಯರಿಗೆ ಮೀಸಲಿಡುವ ಪ್ರಯತ್ನ ನಡೆದಿದೆ. ಇದರಿಂದ ಜನಸಂಖ್ಯೆ ನಿಯಂತ್ರಣದಲ್ಲಿ ಯಶಸ್ವಿಯಾದ ದಕ್ಷಿಣ ಭಾರತದ ರಾಜ್ಯಗಳಿಗೆ ದೊಡ್ಡ ಅನ್ಯಾಯವಾಗಲಿದೆ. ಜನಸಂಖ್ಯೆ ಅಧಿಕವಿರುವ ಉತ್ತರ ಭಾರತದ ರಾಜ್ಯಗಳಿಗೆ ಹೆಚ್ಚುವರಿ ಸ್ಥಾನಗಳು ಸಿಗಲಿವೆ’ ಎಂದು ದೂರಿದರು.

‘ಸದ್ಯದ 543 ಲೋಕಸಭೆ ಸ್ಥಾನಗಳಲ್ಲೇ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ಒದಗಿಸಬೇಕು’ ಎಂದು ಒತ್ತಾಯಿಸಿದರು.

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಗೀತಾ ಚಿದ್ರಿ ಮಾತನಾಡಿ, ‘ಕಾಂಗ್ರೆಸ್ ಪಕ್ಷ ಯಾವಾಗಲೂ ಮಹಿಳೆಯರ ಪರವಾಗಿದೆ. ಹೀಗಾಗಿಯೇ 2023ರ ನಾರಿ ಶಕ್ತಿ ವಂದನಾ ಬಿಲ್ ಜಾರಿಗೆ ಸಹಕಾರ ನೀಡಿದೆ’ ಎಂದು ಹೇಳಿದರು.

ಕಾಂಗ್ರೆಸ್ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಪೂಜಾ ಜಾರ್ಜ್, ವಿದ್ಯಾ ತೂಗಾವೆ, ವಿಜಯಲಕ್ಷ್ಮಿ, ಶಾಹೀನ್ ಬೇಗಂ, ಸಂಗೀತಾ ಕಾರಬಾರಿ ಮೊದಲಾದವರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-33-875056927

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.