ಬೀದರ್: ಭಾಲ್ಕಿ ವಿಧಾನಸಭಾ ಕ್ಷೇತ್ರದ ಶಾಸಕ ಈಶ್ವರ ಬಿ. ಖಂಡ್ರೆ ಅವರಿಗೆ ನೂತನ ಸರ್ಕಾರದ ಸಚಿವ ಸಂಪುಟದಲ್ಲಿ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು, ಖಂಡ್ರೆ ಬೆಂಬಲಿಗರು ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಈಶ್ವರ ಖಂಡ್ರೆ ಅವರು ಪೌರಾಡಳಿತ, ಅರಣ್ಯ ಸಚಿವರಾಗಿ ಉತ್ತಮ ಕೆಲಸ ಮಾಡಿದ್ದಾರೆ. ರಾಜ್ಯದಲ್ಲಿ ಚುರುಕಾಗಿ ಕೆಲಸ ಮಾಡುತ್ತಿರುವ ಜನಪರ ನಾಯಕರಾಗಿದ್ದಾರೆ. ಎಲ್ಲಾ ಸಮಾಜದ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಗುಣ ಖಂಡ್ರೆ ಅವರಲ್ಲಿದೆ. ಅವರು ಯಾವುದೇ ಒಂದು ಸಮುದಾಯಕ್ಕೆ ಸೀಮಿತರಾಗಿಲ್ಲ. ಎಲ್ಲಾ ವರ್ಗದ ಜನರನ್ನು ಒಗ್ಗೂಡಿಸಿಕೊಂಡು ಕೆಲಸ ಮಾಡುವ ವಿಶಿಷ್ಟ ಗುಣ ಇದೆ. ಆದಕಾರಣ ಅವರಿಗೆ ಡಿಸಿಎಂ ಮಾಡಬೇಕೆಂದು ಹಕ್ಕೊತ್ತಾಯ ಮಾಡಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರು ಈಶ್ವರ ಖಂಡ್ರೆ ಅವರಿಗೆ ಡಿಸಿಎಂ ಸ್ಥಾನ ನೀಡಬೇಕೆಂದು ಆಗ್ರಹಿಸಿದರು.

ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿನೋದ್ ಕುಮಾರ್ ಅಪ್ಪೆ, ಮಾರುತಿ ಭಂಗಾರೆ, ಸಂಜುಕುಮಾರ್, ಚಂದ್ರಕಾಂತ್ ನಿರಾಟೆ, ರಾಕೇಶ್ ಕೆ., ರಾಹುಲ್ ಭಂಗೂರೆ, ಮಾಣಿಕೇಶ್ ಪಾಟೀಲ್, ಶಿವಕುಮಾರ್, ಉಮಾಕಾಂತ್, ಶಂಕರ್, ತೇಜಮ್ಮ, ಸ್ಯಾಮುವೆಲ್, ಶಿವಾಜಿ ಮತ್ತಿತರರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-33-1975984209

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.