ಬುಧವಾರ, ಫೆಬ್ರವರಿ 19, 2020
21 °C
ಕೇಂದ್ರ ಸರ್ಕಾರದ ಎಸ್‌ಸಿ, ಎಸ್‌ಟಿ ವಿರೋಧಿ ನೀತಿಗೆ ಖಂಡನೆ

ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಕೇಂದ್ರ ಸರ್ಕಾರದ ಎಸ್‌ಸಿ, ಎಸ್‌ಟಿ ಹಾಗೂ ಹಿಂದುಳಿದ ವರ್ಗಗಳ ವಿರೋಧಿ ನೀತಿಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಅಂಬೇಡ್ಕರ್ ವೃತ್ತದಿಂದ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಜಿಲ್ಲಾಧಿಕಾರಿ ಕಚೇರಿಗೆ ಬಂದು ರಾಷ್ಟ್ರಪತಿಗೆ ಬರೆದ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ ಅವರಿಗೆ ಸಲ್ಲಿಸಿದರು.

ಸಂವಿಧಾನದ ಕಲಂ 16 ರ ಅಡಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದವರಿಗೆ ನೀಡಲಾದ ಸರ್ಕಾರಿ ಹುದ್ದೆಗಳ ನೇರ ನೇಮಕಾತಿ ಹಾಗೂ ಬಡ್ತಿ ಮೀಸಲಾತಿಯನ್ನು ಸಂರಕ್ಷಣೆ ಮಾಡುವಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ವಿಫಲವಾಗಿದೆ ಎಂದು ದೂರಿದರು.

ಸರ್ಕಾರಿ ಹುದ್ದೆಗಳ ನೇರ ನೇಮಕಾತಿ ಮತ್ತು ಬಡ್ತಿ ಮೀಸಲಾತಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಮೂಲಭೂತ ಹಕ್ಕು ಅಲ್ಲ ಎಂದು ಸುಪ್ರೀಕೋರ್ಟ್ ತೀರ್ಪು ನೀಡಿದೆ. ಈ ವಿಷಯದಲ್ಲಿ ಸಮರ್ಥವಾದ ಮಂಡಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದವರ ಹಿತ ರಕ್ಷಣೆಗೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ಕೊಡಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ವಿಜಯಸಿಂಗ್, ಅರವಿಂದಕುಮಾರ ಅರಳಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಚಿದ್ರಿ, ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ, ಕಾರ್ಯದರ್ಶಿ ಪರ್ವೇಜ್ ಕಮಲ್, ಕಾಂಗ್ರೆಸ್ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಮೀನಾಕ್ಷಿ ಸಂಗ್ರಾಮ, ಮುಖಂಡರಾದ ಆನಂದ ದೇವಪ್ಪ, ಸಂಜಯ ಜಾಗೀರದಾರ, ಇರ್ಷಾದ್ ಪೈಲ್ವಾನ್, ರುಕ್ಮಾರೆಡ್ಡಿ ಪಾಟೀಲ, ವೆಂಕಟರಾವ್ ಶಿಂದೆ, ಚಂದ್ರಕಾಂತ ಹಿಪ್ಪಳಗಾಂವ್  ಪಾಲ್ಗೊಂಡಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು