ಬೀದರ್: ನಗರದ ನ್ಯೂಟೌನ್ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ಚಂದ್ರಶೇಖರ (28) ಬುಧವಾರ ಕರ್ತವ್ಯದಲ್ಲಿರುವಾಗಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಹೃದಯಾಘಾತವಾದ ತಕ್ಷಣ ಅವರನ್ನು ಬ್ರಿಮ್ಸ್ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಯಿತು. ಆದರೆ, ಅವರು ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದರು ಎಂದು ತಿಳಿದು ಬಂದಿದೆ.
ಮೃತ ಕಾನ್‌ಸ್ಟೆಬಲ್ ಚಂದ್ರಶೇಖರ ಅವರು ರಾಯಚೂರು ತಾಲ್ಲೂಕಿನ ತಲಮಾರಿ ಗ್ರಾಮದವರು. ಅವರಿಗೆ ಪತ್ನಿ, ಪುತ್ರ ಇದ್ದಾರೆ. 2018ರಲ್ಲಿ ಪೊಲೀಸ್ ಇಲಾಖೆಗೆ ಆಯ್ಕೆಯಾಗಿದ್ದರು. ಐದು ವರ್ಷಗಳಿಂದ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಆಗಿ ಬೀದರ್ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.